ETV Bharat / state

ನಕಲಿ ಜಾತಿ ಪ್ರಮಾಣಪತ್ರದ ಪ್ರಯೋಜನ ಪ್ರಶ್ನಿಸಲು ಕಾಲಮಿತಿ ಅಡ್ಡಿ ಬರುವುದಿಲ್ಲ: ಹೈಕೋರ್ಟ್ - high court - HIGH COURT

ನಕಲಿ ಜಾತಿ ಪ್ರಮಾಣದಿಂದ ಪಡೆದಿರುವ ಪ್ರಯೋಜನಗಳನ್ನು ಪ್ರಶ್ನಿಸಲು ಯಾವುದೇ ಕಾಲಮಿತಿ ಅಡ್ಡಿ ಬರುವುದಿಲ್ಲ ಎಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠ ತಿಳಿಸಿದೆ.

karnataka-high-court-order-on-fake-caste-certificate
ನಕಲಿ ಜಾತಿ ಪ್ರಮಾಣಪತ್ರದ ಪ್ರಯೋಜನ ಪ್ರಶ್ನಿಸಲು ಕಾಲಮಿತಿ ಅಡ್ಡಿ ಬರುವುದಿಲ್ಲ: ಹೈಕೋರ್ಟ್
author img

By ETV Bharat Karnataka Team

Published : Apr 13, 2024, 8:52 PM IST

ಬೆಂಗಳೂರು: ನಕಲಿ ಜಾತಿ ಪ್ರಮಾಣದಿಂದ ಪಡೆದಿರುವ ಪ್ರಯೋಜನಗಳನ್ನು ಪ್ರಶ್ನಿಸಲು ಯಾವುದೇ ಕಾಲಮಿತಿ ಅಡ್ಡಿ ಬರುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ನಕಲಿ ಜಾತಿ ಪ್ರಮಾಣಪತ್ರ ಪಡೆದು ಆಯುಷ್ ವೈದ್ಯಾಧಿಕಾರಿ ಹುದ್ದೆ ಗಿಟ್ಟಿಸಿಕೊಂಡು ಸೇವೆ ಸಲ್ಲಿಸುತ್ತಿದ್ದ ಡಾ. ಗುಡ್ಡದೇವ್ ಗೊಲ್ಲಪ್ಪ ಯಡ್ರಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಕಲಬುರಗಿ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ, ವಿಜಯಪುರದಲ್ಲಿ ಕಾಲೇಜಿಗೆ ಸೇರುವಾಗ ಭರ್ತಿ ಮಾಡಿದ್ದ ನಮೂನೆಯಲ್ಲಿ ಅರ್ಜಿದಾರರು ತಾನು ಹಿಂದೂ(ಕುರುಬ), ಹಿಂದುಳಿದ ವರ್ಗದಕ್ಕೆ ಸೇರಿದವನು ಎಂದು ಉಲ್ಲೇಖಿಸಿದ್ದಾರೆ. ಆದರೆ ಉದ್ಯೋಗದ ವೇಳೆಗೆ ಅವರು ಗೊಂಡ ಜಾತಿಗೆ ಸೇರಿದವರು ಪರಿಶಿಷ್ಟ ಪಂಗಡ(ಎಸ್​ಟಿ)ದವರು ಎಂದು ಬದಲಾಯಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪೀಠ ಪ್ರಶ್ನಿಸಿದೆ.

ಅರ್ಜಿದಾರರು ನಿಜವಾಗಿಯೂ ಎಸ್​ಟಿ ವರ್ಗಕ್ಕೆ ಸೇರಿದ್ದರೆ ಅವರು 1975ರಲ್ಲಿ ಕಾಲೇಜಿಗೆ ಸೇರುವಾಗ ಕುರುಬ ಜಾತಿ ಎಂದು ಉಲ್ಲೇಖಿಸುತ್ತಿರಲಿಲ್ಲ. ಹಾಗಾಗಿ ಅರ್ಜಿದಾರರು ಶುದ್ಧ ಹಸ್ತದಿಂದ ನ್ಯಾಯಾಲಯದ ಮೊರೆ ಬಂದಿಲ್ಲ, ತಮ್ಮ ಪರವಾಗಿ ಆದೇಶವನ್ನು ಪಡೆಯಲು ಅವರು ಹಲವು ಸಂಗತಿಗಳನ್ನು ಮುಚ್ಚಿಟ್ಟಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಜತೆಗೆ, ಅವರು ನೇಮಕ ಪ್ರಾಧಿಕಾರದ ಮುಂದೆ ನಕಲಿ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಅದರಿಂದ ಉದ್ಯೋಗಕ್ಕೆ ಸೇರಿ ಸಾಕಷ್ಟು ಪ್ರಯೋಜನ ಪಡೆದಿದ್ದಾರೆ. ಹಾಗಾಗಿ ಅವರ ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯುಪೀಠ ಹೇಳಿದೆ.

ಅರ್ಜಿದಾರರು, ಕಲಬುರಗಿ ಜಿಲ್ಲೆಯಲ್ಲಿ ಕುರುಬ ಮತ್ತು ಗೊಂಡ ಸಮುದಾಯ ಒಂದೇ ಎಂದು ಕರೆಯಲಾಗುತ್ತಿದೆ. ಎರಡೂ ಒಂದೇ ಅರ್ಥವನ್ನು ನೀಡುತ್ತವೆ. 1993ರಲ್ಲಿ ಎರಡೂ ಒಂದೇ ಸಮುದಾಯಗಳೆಂಬ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. 1997ರಲ್ಲಿ ಸರ್ಕಾರ ಕಲಬುರಗಿ ಜಿಲ್ಲೆಯಲ್ಲಿನ ಗೊಂಡ ಸಮುದಾಯವನ್ನು ಎಸ್​ಟಿ ಪಟ್ಟಿಯಲ್ಲಿ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ವಾದಿಸಿದ್ದರು.

ಆದರೆ ಅದನ್ನು ಅಲ್ಲಗಳೆದ ಸರ್ಕಾರದ ಪರ ವಿಶೇಷ ವಕೀಲ ಸಿ. ಜಗದೀಶ್‌, ಈ ವಿಷಯಕ್ಕೆ ಸಂಬಂಧಿಸಿದಂತೆ 1986ರ ಆದೇಶವನ್ನು ಹಲವು ಪೀಠಗಳಲ್ಲಿ ಪ್ರಶ್ನಿಸಲಾಗಿದೆ. ಆ ಆದೇಶದ ಲಾಭ ಪಡೆಯಲು ಸಾಧ್ಯವಿಲ್ಲ. ಗೊಂಡ ಮತ್ತು ಕುರುಬ ಎರಡೂ ಬೇರೆ ಬೇರೆ ಜಾತಿಗಳು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಏನಿದು ಪ್ರಕರಣ: ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಆಯುಷ್ ಇಲಾಖೆ ಆಯುಷ್ ವೈದ್ಯಾಧಿಕಾರಿ ಹುದ್ದೆಗೆ 1995ರ ಏ.9ರಂದು ನೇಮಕಗೊಂಡಿದ್ದರು. ಅದಕ್ಕಾಗಿ ಅವರು ಪರಿಶಿಷ್ಟ ಪಂಗಡ ಸಮುದಾಯದಡಿ ಬರುವ ಗೊಂಡ ಜಾತಿಯ ಪ್ರಮಾಣಪತ್ರವನ್ನು ಪಡೆದಿದ್ದರು. ಜಾತಿ ಪ್ರಮಾಣಪತ್ರದ ಆಧಾರದಲ್ಲಿ ಅವರ ಸೇವೆ ಕಾಯಂ ಆಗಿ ಅವರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸಿದ್ದರು. ಆದರೆ ಕೃಷ್ಣಮೂರ್ತಿ ನಾಯಕ್ ಮತ್ತು ನಂಜರಾಜು ಅವರು ಅರ್ಜಿದಾರರು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆಂದು ದೂರು ನೀಡಿದ್ದರು. ಅದನ್ನು ಆಧರಿಸಿ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಪರಿಶೀಲನೆ ನಡೆಸಿದಾಗ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆಂಬುದು ಸಾಬೀತಾಗಿ ಡಾ. ಗುಡ್ಡದೇವ್ ಗೊಲ್ಲಪ್ಪ ಯಡ್ರಾಮಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ಆರೋಪಿ ವಿವರಣೆ ಕೇಳದೇ ಗಡಿಪಾರು: ಆದೇಶ ರದ್ದುಗೊಳಿಸಿದ ಹೈಕೋರ್ಟ್ - Deportation Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.