ETV Bharat / state

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ: ಡಿಸಿಎಂ ಡಿಕೆ ಶಿವಕುಮಾರ್​ಗೆ ಲೋಕಾಯುಕ್ತ ನೋಟಿಸ್ - DK Shivakumar - DK SHIVAKUMAR

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

karnataka-lokayukta-notice-to-dk-shivakumar-regarding-disproportionate-assets-case
ಆದಾಯಕ್ಕೂ ಮೀರಿ ಆಸ್ತಿ ಆರೋಪ: ಡಿಸಿಎಂ ಡಿಕೆ ಶಿವಕುಮಾರ್​ಗೆ ಲೋಕಾಯುಕ್ತ ನೊಟೀಸ್
author img

By ETV Bharat Karnataka Team

Published : Apr 11, 2024, 7:06 AM IST

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ ಪ್ರಕರಣವು ಸಿಬಿಐನಿಂದ ರಾಜ್ಯ ಲೋಕಾಯುಕ್ತಕ್ಕೆ ವರ್ಗಾವಣೆ ಆದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಅಗತ್ಯ ದಾಖಲಾತಿ ಒದಗಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

2013 ರಿಂದ‌ 2018 ರವರೆಗೆ 74.93 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಆರೋಪ ಸಂಬಂಧ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ್ದ ರಾಜ್ಯ ಸರ್ಕಾರವು ಬಳಿಕ ತನಿಖೆ ಲೋಕಾಯುಕ್ತಕ್ಕೆ ವಹಿಸಿತ್ತು. ಈ ಸಂಬಂಧ ಪ್ರಕರಣದ ತನಿಖಾಧಿಕಾರಿ ಎಂ.ಹೆಚ್. ಸತೀಶ್ ಅವರು ಬುಧವಾರ ಡಿಕೆಶಿಗೆ ನೋಟಿಸ್ ನೀಡಿದ್ದಾರೆ. ಈ ಹಿಂದೆ ಸಿಬಿಐ ತನಿಖಾಧಿಕಾರಿಗಳಿಗೆ ಒದಗಿಸಿದ ಮಾಹಿತಿ ಹಾಗೂ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ.

ಶಿವಕುಮಾರ್ ಏಪ್ರಿಲ್ 1, 2013 ರಿಂದ ಏಪ್ರಿಲ್ 30, 2018 ರ ಅವಧಿಯಲ್ಲಿ ಆದಾಯಕ್ಕೆ ಅಸಮಾನವಾಗಿ 74.93 ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಸಿಬಿಐ ಹೇಳಿತ್ತು. ಈ ಸಂಬಂಧ 2019 ರ ಸೆಪ್ಟೆಂಬರ್ 9 ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಅಂದಿನ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.

ಇದನ್ನು ಪ್ರಶ್ನಿಸಿ ಶಿವಕುಮಾರ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು. ಈ ಸಂಬಂಧ ಸಿಬಿಐ ಕೂಡ ಹೈಕೋರ್ಟ್​ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ರಕರಣ: ತನಿಖೆಗೆ ಕಾಲಮಿತಿ ಇಲ್ಲವೇ ಎಂದು ಸಿಬಿಐಗೆ ಹೈಕೋರ್ಟ್ ಪ್ರಶ್ನೆ - D K Shivakumar Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.