ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸಿಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಗೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ್, ಆಂಗ್ಲೋ ಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದ 18ರಿಂದ 55 ವರ್ಷದೊಳಗಿನ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಹತೆಗಳೇನು?: ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯ ಖಾಯಂ ನಿವಾಸಿಗಳಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ 81,000 ಮತ್ತು ನಗರ ಪ್ರದೇಶದವರಿಗೆ 1.03 ಲಕ್ಷ ರೂ.ಕ್ಕಿಂತ ಕಡಿಮೆ ಇರಬೇಕು. ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ/ಪಿಎಸ್‌ಯು ಉದ್ಯೋಗಿಗಳಾಗಿರಬಾರದು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸುಸ್ಥಿದಾರರಾಗಿರಬಾರದು.
ಆಸಕ್ತರು ಸೇವಾ ಸಿಂಧು ಪೋರ್ಟಲ್ www.kmdconline.karnataka.gov.inರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಬುಕ್ ಜೆರಾಕ್ಸ್, ಯೋಜನಾ ವರದಿ, ಪಡಿತರ ಚೀಟಿ ಮತ್ತು 1 ಪಾಸ್‌ಪೋರ್ಟ್ ಸೈಜ್ ಪೋಟೋಸಹಿತ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗದ ರಸ್ತೆ, ಅಜ್ಯುತ್‌ರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ, ದೂ.ಸಂ.: 08182-228262 ನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ಜುಲೈನಲ್ಲಿ ಉದ್ಯೋಗ ನೇಮಕಾತಿ ಶೇ 12ರಷ್ಟು ಏರಿಕೆ: ಫಾರ್ಮಾ, ಎಫ್ಎಂಸಿಜಿ ಮುಂಚೂಣಿಯಲ್ಲಿ - Hiring In India