ETV Bharat / state

ರಾಜ್ಯದಲ್ಲಿ 4,071 ಕೋಟಿ ಬಂಡವಾಳ ಹೂಡಿಕೆಯ ಪ್ರಸ್ತಾವನೆಗೆ ಅಸ್ತು; ಸಾವಿರಾರು ಜನರಿಗೆ ಉದ್ಯೋಗ ನಿರೀಕ್ಷೆ - Invest In Karnataka

ರಾಜ್ಯದಲ್ಲಿ 4,071.11 ಕೋಟಿ ಬಂಡವಾಳ ಹೂಡಿಕೆಯ 88 ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ (ETV Bharat)
author img

By ETV Bharat Karnataka Team

Published : Sep 28, 2024, 8:40 AM IST

‌ಬೆಂಗಳೂರು: 50 ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 14 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳು ಸೇರಿದಂತೆ ಒಟ್ಟು 88 ಯೋಜನೆಗಳಿಂದ 4,071.11 ಕೋಟಿ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಗುರುವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದೆ. ಈ ಯೋಜನೆಗಳಿಂದ 10,585 ಜನರಿಗೆ ಉದ್ಯೋಗವಕಾಶ ಲಭಿಸಲಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಆನೇಕಲ್‌ನ ವೀರಸಂದ್ರ ಗ್ರಾಮದಲ್ಲಿ 485 ಕೋಟಿ ಹೂಡಿಕೆಯೊಂದಿಗೆ 1,000 ಮಂದಿಗೆ ಐಟಿ ಮತ್ತು ಐಟಿಇಎಸ್‌ ಕ್ಷೇತ್ರದಲ್ಲಿ ಉದ್ಯೋಗ ನೀಡುವ ಅರಾಟ್‌ ಒನ್‌ ವರ್ಲ್ಡ್‌ ಪ್ರೈ.ಲಿ., (ಈ ಹಿಂದಿನ ಆರ್‌ಜಿಆರ್‌ ಟೆಕ್‌ಪಾರ್ಕ್‌ ಪ್ರೈ.ಲಿ.) ಕಂಪನಿಗೆ ಸಭೆಯಲ್ಲಿ ಅನುಮತಿ ನೀಡಲಾಗಿದೆ.

ಡೇರಿ ಕ್ಲಾಸಿಕ್ ಐಸ್ ಕ್ರೀಂ ಸಂಸ್ಥೆಯು, ಕಲಬುರಗಿ ಜಿಲ್ಲೆಯ ನಂದೂರು ಕಾಸರಟಗಿ ಕೈಗಾರಿಕಾ ಪ್ರದೇಶದಲ್ಲಿ ₹285 ಕೋಟಿ ವೆಚ್ಚದಲ್ಲಿ ಐಸ್ ಕ್ರೀಂ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು ಇದರಿಂದ 900 ಜನರಿಗೆ ಉದ್ಯೋಗ ಸಿಗಲಿದೆ. ಫ್ರೋಜನ್ ಡೆಸರ್ಟ್, ಕುಲ್ಫಿ ಇತ್ಯಾದಿ ಕೋಲ್ಡ್ ಸ್ಟೋರೇಜ್ ಸಹಿತ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ವಿವರಿಸಿದರು.

₹50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡಲಿರುವ 14 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹ 2,031.76 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಇದರಿಂದ 3,302 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.

₹15 ಕೋಟಿಯಿಂದ ₹50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 68 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹1,355.07 ಕೋಟಿ ಬಂಡವಾಳ ಹರಿದುಬರಲಿದೆ. 5,049 ಜನರಿಗೆ ಉದ್ಯೋಗವಕಾಶ ಸಿಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 6 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ ₹ 684.28 ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಿದೆ. ಇದರಿಂದ ಅಂದಾಜು 2,234 ಉದ್ಯೋಗಗಳು ಸೃಷ್ಟಿಯಾಗಲಿವೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಮಹೇಶ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ವಿಮಾ ಪಾಲಿಸಿ ಮರಳಿಸುವುದು ಹೇಗೆ?: ಫ್ರೀ-ಲುಕ್ ಅವಧಿ ಎಂದರೇನು? ಇಲ್ಲಿದೆ ಮಾಹಿತಿ - Insurance Policy Refund

ETV Bharat Logo

Copyright © 2024 Ushodaya Enterprises Pvt. Ltd., All Rights Reserved.