ETV Bharat / state

ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ: 14 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ - Karnataka Rain Alert - KARNATAKA RAIN ALERT

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರದ ವಿಜ್ಞಾನಿ ಡಾ ಎನ್ ಪುವಿಯರಸನ್ ತಿಳಿಸಿದ್ದಾರೆ.

Rain, yellow alert announced in 14 districts of the state
ಮಳೆ ,ರಾಜ್ಯದ 14 ಜಿಲ್ಲೆಗಳಲ್ಲಿ ಅರೇಂಜ್,ಯೆಲ್ಲೋ ಅಲರ್ಟ್ ಘೋಷಣೆ (ETV Bharat)
author img

By ETV Bharat Karnataka Team

Published : May 19, 2024, 6:05 PM IST

ಬೆಂಗಳೂರು: ಮೇ ತಿಂಗಳಲ್ಲಿ ಪಾರಂಭವಾಗಿರುವ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಎಡೆ ಬಿಡದೆ ಸುರಿಯುತ್ತಿದೆ. ಕಳೆದ 6 ತಿಂಗಳಿನಿಂದ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಈಗ ಮತ್ತೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿದ್ದು ಹವಾಮಾನ ಇಲಾಖೆ 14 ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿದೆ.

ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಾಮರಾಜನಗರದಲ್ಲಿ ಸೋಮವಾರ ಆರೆಂಜ್ ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆಯಲ್ಲಿ ಇಂದು ಮತ್ತೆ ನಾಳೆ ಮತ್ತು ಮೇ 22 ರಂದು, ಮಂಡ್ಯದಲ್ಲಿ ಮೂರು ದಿನ ಮತ್ತು ಮೇ 23 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೈಸೂರಿನಲ್ಲಿ ಸೋಮವಾರ ಆರೆಂಜ್ ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಮನಗರ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮತ್ತು ತುಮಕೂರಿನಲ್ಲಿ ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಮತ್ತು 22 ಡಿಗ್ರಿ ಇರಲಿದೆ.

ವ್ಯಾಪಕ ಮಳೆ: ಕಡಿಮೆ ಉಷ್ಣ ವಲಯದ ಮಟ್ಟಗಳಲ್ಲಿ (3 ಕಿ.ಮೀ ವರೆಗೆ) ಪಶ್ಚಿಮ ಮಾರುತಗಳು ಬೀಸುತ್ತಿದ್ದು, ಈ ಪ್ರದೇಶದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 4.5 ಕಿಮೀ ಎತ್ತರದ ವರೆಗೆ ಮೇಲ್ಮೈ ಸುಳಿಗಾಳಿ ಇರಲಿದೆ. ಮೋಡದ ವಾತಾವರಣ ಹೆಚ್ಚಳಗೊಂಡು ಕಳೆದ 24 ಗಂಟೆಗಳಲ್ಲಿ ಅರಬ್ಬೀ ಸಮುದ್ರದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗಿದೆ.

ನೈಋತ್ಯ ಮಾನ್ಸೂನ್ ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಕೆಲವು ಭಾಗಗಳಿಗೆ ಮತ್ತು ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಗಳು ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಕೆಲವು ಭಾಗಗಳಿಗೆ ಇಂದು ಮುಂದುವರೆದಿದೆ. ಈ ಕಾರಣದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿ ಮೀ) ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ. ಮುಂದಿನ 5 ದಿನ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಇದನ್ನೂಓದಿ:ಮಳೆ ಅಬ್ಬರಕ್ಕೆ 12 ಮಂದಿ ಸಾವು; ಮುಂದಿನ 7ರಿಂದ 15 ದಿನಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ - RAIN FORECAST

ETV Bharat Logo

Copyright © 2024 Ushodaya Enterprises Pvt. Ltd., All Rights Reserved.