ETV Bharat / state

ಮುಂಗಾರು ಆರ್ಭಟ: ಮೂರು ದಿನ ಭಾರೀ ಮಳೆ ಸಾಧ್ಯತೆ, ನಿಮ್ಮ ಜಿಲ್ಲೆಯ ಹವಾಮಾನ ವರದಿ ಹೀಗಿದೆ - Karnataka Rain Forecast

author img

By ETV Bharat Karnataka Team

Published : Aug 31, 2024, 6:39 PM IST

ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರಿದಿದೆ. ಕರಾವಳಿ, ಉತ್ತರ ಒಳನಾಡು ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ವರದಿ
ಹವಾಮಾನ ಇಲಾಖೆ ವರದಿ (ETV Bharat)
ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್ ಪಾಟೀಲ್ (ETV Bharat)

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಬಿಡುವು ಕೊಡುತ್ತಿಲ್ಲ. ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ಸಂಜೆಯಿಂದ ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಲಾಗಿದೆ.

ಇನ್ನು ಉತ್ತರ ಒಳನಾಡಿನ ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಮತ್ತು ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೀದರ್, ಕೊಪ್ಪಳ ಜಿಲ್ಲೆಗಳಿಗೆ ಇಂದು ಯೆಲ್ಲೋ, ನಾಳೆ ಆರೆಂಜ್ ಅಲರ್ಟ್ ಹಾಗೂ ಕೊಡಗು ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಾವಣಗೆರೆ, ಗದಗ ಜಿಲ್ಲೆಗೆ ಎರಡೂ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಸಹ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದ್ದು, ನಿರಂತರ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪಲಿದೆ. ಬೀದರ್, ಕೊಪ್ಪಳ, ಬಾಗಲಕೋಟೆ, ಗದಗ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಹ ನಿರಂತರ ಗಾಳಿಯೊಂದಿಗೆ ಮಳೆ ಬೀಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ಕರ್ನಾಟಕದಲ್ಲಿ ಗಾಳಿಯ ವೇಗ 45 ರಿಂದ 55 ಕಿ.ಮೀ ಇರಲಿದೆ. ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರಲಿದೆ. ಹೀಗಾಗಿ ಮೀನುಗಾರರಿಗೆ ಎಚ್ಚರಿಕೆಯ ಸಂದೇಶವನ್ನು ಹವಾಮಾನ ಇಲಾಖೆ ನೀಡಿದೆ.

ರಾಜಧಾನಿಯಲ್ಲಿ ಹಗುರದಿಂದ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯು ಬೀಸುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ.

ದಕ್ಷಿಣ ಗುಜರಾತ್‌ನಿಂದ ಕೇರಳದ ಕರಾವಳಿಯವರೆಗಿನ ಸರಾಸರಿ ಸಮುದ್ರ ಮಟ್ಟದಲ್ಲಿ ಕಡಲಾಚೆಯ ಟ್ರಫ್ ಗುರುತಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ನಿನ್ನೆ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ 9 ಸೆಂ.ಮೀ ದಾಖಲಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ವಿದ್ಯುತ್ತನ್ನೇ ಕಾಣದ ಗ್ರಾಮವಿದು: ಯಾವುದಾ ಊರು? - Village without electricity

ETV Bharat Logo

Copyright © 2024 Ushodaya Enterprises Pvt. Ltd., All Rights Reserved.