ETV Bharat / state

ಬೆಂಗಳೂರಿನಲ್ಲಿ 133 ವರ್ಷಗಳ ನಂತರ ಅತ್ಯಧಿಕ ಮಳೆ; ರಾಜ್ಯದ 17 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ - Karnataka Rain

ರಾಹ್ಯದಲ್ಲಿ ಮುಂಗಾರು ಮಾರುತಗಳು ಆವರಿಸಿದ್ದು, 24 ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

author img

By ETV Bharat Karnataka Team

Published : Jun 3, 2024, 6:10 PM IST

Updated : Jun 3, 2024, 6:44 PM IST

ಕರ್ನಾಟಕ ಮಳೆ
ಕರ್ನಾಟಕ ಮಳೆ (ANI Pictures)

ಬೆಂಗಳೂರು: ಮುಂಗಾರು ಮಾರುತಗಳು ಸೋಮವಾರ ಬಹುತೇಕ ರಾಜ್ಯವನ್ನು ಆವರಿಸಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಸುರಿದ ಮಳೆ 133 ವರ್ಷದ ದಾಖಲೆಯನ್ನೇ ನಿರ್ಮಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಿರುಗಾಳಿ 40 ರಿಂದ 50 ಕಿಮೀ ವೇಗದಲ್ಲಿ ಬೀಸಲಿದೆ. ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಜುಲೈ-ಸೆಪ್ಟೆಂಬರ್ ವೇಳೆಗೆ 'ಲಾ ನಿನಾ' ಪ್ರಬಲ, ಉತ್ತಮ ಮುಂಗಾರು ನಿರೀಕ್ಷೆ - El Nio Ending

ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 19 ಡಿಗ್ರಿ ಇರಲಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಮಧ್ಯ ಅರೇಬಿಯನ್ ಸಮುದ್ರದ ಭಾಗಗಳು, ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಗೋವಾ, ರಾಯಲಸೀಮಾ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಛತ್ತೀಸ್‌ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಿಗೆ ನೈರುತ್ಯ ಮಾನ್ಸೂನ್ ಆವರಿಸಿದೆ. ಮುಂದಿನ 4-5 ದಿನಗಳಲ್ಲಿ ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಮಾರುತಗಳು ಅವರಿಸಲಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ 133 ವರ್ಷಗಳ ಬಳಿಕ ದಾಖಲೆಯ ಮಳೆ: ಮನೆಗಳಿಗೆ ನೀರು, ಮರ, ವಿದ್ಯುತ್ ಕಂಬಗಳು ಧರೆಗೆ - Bengaluru Rain Record

Last Updated : Jun 3, 2024, 6:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.