ETV Bharat / state

ಒಂದು ತಿಂಗಳಲ್ಲಿ 38,000 ಮನೆಗಳ ಮೂಲಕ ವಸತಿ ರಹಿತರಿಗೆ ಸೂರು: ಸಚಿವ ಜಮೀರ್ ಅಹ್ಮದ್ - MINISTER ZAMEER AHMED

ಶುಕ್ರವಾರ ಹೊಸಪೇಟೆ ಪುನೀತ್ ರಾಜಕುಮಾರ್​ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗಿದ್ದು, ಜಮೀರ್ ಅಹ್ಮದ್ ಖಾನ್ ಧ್ವಜಾರೋಹಣ ನೆರವೇರಿಸಿದ್ದಾರೆ.

ಪುನೀತ್ ರಾಜಕುಮಾರ ಕ್ರೀಡಾಂಗಣದಲ್ಲಿ ನಡೆದ  ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ
ಪುನೀತ್ ರಾಜಕುಮಾರ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ (ETV Bharat)
author img

By ETV Bharat Karnataka Team

Published : Nov 2, 2024, 9:06 AM IST

ವಿಜಯನಗರ: "ನಾಡಿನಲ್ಲಿ ಆಚರಿಸುವ ಯುಗಾದಿ, ದೀಪಾವಳಿ, ಕ್ರಿಸ್ಮಸ್ ಸೇರಿದಂತೆ ಎಲ್ಲಾ ಹಬ್ಬಗಳಿಗಿಂತ ಕರ್ನಾಟಕ ರಾಜ್ಯೋತ್ಸವ ಹಬ್ಬವೇ ವಿಶೇಷ. ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಎಲ್ಲಾ ಸಮಾಜದವರು ಭಾವೈಕ್ಯತೆಯಿಂದ ರಾಜ್ಯವನ್ನು ಮುನ್ನಡೆಸಲಾಗುತ್ತಿದೆ" ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. .

ಅವರು ಶುಕ್ರವಾರ ಹೊಸಪೇಟೆ ಪುನೀತ್ ರಾಜಕುಮಾರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥಸಂಚಲನದಲ್ಲಿ ಭಾಗವಹಿಸಿದ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ತಮ್ಮ ರಾಜ್ಯೋತ್ಸವ ಸಂದೇಶದಲ್ಲಿ ಮಾತನಾಡಿದರು.

"ಚುನಾವಣೆ ವೇಳೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ, ಅದರಂತೆ ಐದೂ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಿ ಅನುಷ್ಠಾನ ಮಾಡಲಾಗಿದೆ. ನಾವು ಆರನೇ ಗ್ಯಾರಂಟಿ ಘೋಷಣೆ ಮಾಡಿಲ್ಲ. ಆದರೆ, ಅದು ಬಡ ಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ. ಸ್ಲಂ ಬೋರ್ಡ್​ನಿಂದ 1,80,253 ಮನೆಗಳು ಮತ್ತು ರಾಜೀವ ಗಾಂಧಿ ವಸತಿ ನಿಗಮದಿಂದ 47,860 ಮನೆಗಳು ಸೇರಿ 20,30,900 ಮನೆಗಳನ್ನು ಈ ಹಿಂದಿನ ನಮ್ಮ ಸರ್ಕಾರದಲ್ಲಿ ಮಂಜೂರು ಮಾಡಲಾಗಿ. ಇವುಗಳು ಕಾರಣಾಂತರದಿಂದ ಹಂಚಿಕೆಯಾಗಲಿಲ್ಲ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮಂಜೂರು ಮಾಡಲಾಗುತ್ತದೆ".

"ವಸತಿ ರಹಿತರ ಸಮಸ್ಯೆಗಳಿಗೆ ಸ್ಪಂದಿಸಿ ಕಳೆದ ಫೆಬ್ರವರಿಯಲ್ಲಿ 36,799 ಮನೆಗಳನ್ನು ನೀಡಿ ಇದಕ್ಕಾಗಿ ರೂ. 500 ಕೋಟಿ ಬಿಡುಗಡೆ ಮಾಡಲಾಗಿತ್ತು. ಬರುವ ಒಂದು ತಿಂಗಳಲ್ಲಿ ಮತ್ತೆ 38,000 ಮನೆಗಳನ್ನು ನೀಡುವ ಮೂಲಕ ವಸತಿ ರಹಿತರಿಗೆ ಸೂರು ಕಲ್ಪಿಸಲಾಗುತ್ತದೆ ಎಂದರು. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳಾಗಿದ್ದು ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತವಾಗುವುದಿಲ್ಲ. ಈ ಯೋಜನೆಗಳಿಂದ ಜನರಿಗೆ ಸಾಕಷ್ಟು ಅನುಕೂಲವಾಗಿದ್ದು ಆರ್ಥಿಕ ಮಟ್ಟ ಸುಧಾರಣೆಯಾಗಿದೆ" ಎಂದರು.

ಸಾಧಕರಿಗೆ ಸನ್ಮಾನ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತವಾಗಿ ವಿಜಯನಗರ ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಸನ್ಮಾನಿಸಲಾಯಿತು. ಹೆಚ್.ಎಂ. ಶಂಕರಯ್ಯ ಕೋಗಳಿ, ಹಗರಿಬೊಮ್ಮನಹಳ್ಳಿ ತಾಲೂಕು (ಸಂಗೀತ), ಎಚ್.ನಾಗರಾಜ, ಬಾಗಳಿ ಗ್ರಾಮ, ಹರಪನಹಳ್ಳಿ ತಾಲೂಕು (ರಂಗಭೂಮಿ), ಶೇಖರಪ್ಪ ಕಿನ್ನೂರಿ ಜಂಬುನಾಥನಹಳ್ಳಿ, ಹೊಸಪೇಟೆ ತಾಲೂಕು (ಸುಡುಗಾಡು ಸಿದ್ದರು, ಜಾನಪದ), ಬಣಗಾರ ಮೂಗಪ್ಪ, ಹಿರೇಹೆಗ್ಡಾಳ್, ಕೂಡ್ಲಿಗಿ ತಾಲೂಕು (ರಂಗಭೂಮಿ), ಕೆ.ರಾಮು, ಕಡ್ಡಿರಾಂಪುರ ಗ್ರಾಮ, ಹೊಸಪೇಟೆ ತಾಲೂಕು (ಹಗಲುವೇಷ), ಇಟ್ಟಂಗಿ ರೆಹಮಾನ್ ಸಾಬ್ ಹೊಸಪೇಟೆ (ಸಾಹಿತ್ಯ), ಸ್ಪೂರ್ತಿ ವೇದಿಕೆ ಹೊಸಪೇಟೆ (ಸಂಘ-ಸಂಸ್ಥೆ), ಶ್ರೀಬಾಲಕೋಟೇಶ್ವರರಾವ್ ಅಡವಿ ಆನಂದದೇವನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲೂಕು (ಪ್ರಗತಿಪರ ರೈತ), ಡಾ.ಮಹೇಶ್ವರ ಸ್ವಾಮೀಜಿ, ನಂದಿಪುರ ಗ್ರಾಮ, ಹಗರಿಬೊಮ್ಮನಹಳ್ಳಿ ತಾಲೂಕು (ಪ್ರಗತಿಪರ ರೈತ), ಆರ್.ಮಲ್ಲಿಕಾರ್ಜುನ ದೂಪದಹಳ್ಳಿ ಗ್ರಾಮ ಕೊಟ್ಟೂರು ತಾಲೂಕು (ಪ್ರಗತಿಪರ ರೈತ), ಡಾ.ರವಿಕುಮಾರ ಕೆ.ಎಂ. ವಾತ್ಸಲ್ಯ ಟ್ರಸ್ಟ್, ಆನಂತಶಯನಗುಡಿ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆ, ಮಹಿಳಾ ಪೇದೆ, ಗೃಹ ರಕ್ಷಕದಳ, ಎನ್‍ಸಿಸಿ, ಸೇವಾದಳ, ಪೌರ ಕಾರ್ಮಿಕರ ತಂಡದಿಂದ ಆಕರ್ಷಕ ಪಥಸಂಚಲನ ನಡೆಯಿತು. ವಸತಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮೊಟ್ಟ ಮೊದಲ ಶಿಲಾಶಾಸನವಾದ ಹಲ್ಮಿಡಿ ಶಾಸನದ ಸ್ಮಾರಕ ಸ್ಥಾಪನೆಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಷಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಅದ್ಧೂರಿ ಕರ್ನಾಟಕ ರಾಜ್ಯೋತ್ಸವ: ಚನ್ನಮ್ಮ ವೃತ್ತದಲ್ಲಿ ಕುಣಿದು ಕುಪ್ಪಳಿಸಿದ ಕನ್ನಡ ತಾಯಿ ಮಕ್ಕಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.