ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆ-2 ವಿದ್ಯಾರ್ಥಿಗಳ ಗಮನಕ್ಕೆ: ನೀವು ತೆಗೆದುಕೊಂಡ ವಿಷಯಕ್ಕಷ್ಟೇ ಪರೀಕ್ಷೆ ಬರೆಯಿರಿ - 2nd PUC Exam 2 - 2ND PUC EXAM 2

ದ್ವಿತೀಯ ಪಿಯುಸಿ ಪರೀಕ್ಷೆ-2 ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ.

2nd-puc-exam-2
ದ್ವಿತೀಯ ಪಿಯುಸಿ ಪರೀಕ್ಷೆ-2 ವಿದ್ಯಾರ್ಥಿಗಳ ಗಮನಕ್ಕೆ: ನೀವು ತೆಗೆದುಕೊಂಡ ವಿಷಯಕ್ಕಷ್ಟೇ ಪರೀಕ್ಷೆ ಬರೆಯಿರಿ
author img

By ETV Bharat Karnataka Team

Published : Apr 25, 2024, 7:35 PM IST

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ತೆಗೆದುಕೊಂಡಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ಹೆಚ್ಚುವರಿ ವಿಷಯಗಳಿವೆ ಎನ್ನುವ ಗೊಂದಲಕ್ಕೆ ಸಿಲುಕದೆ, ಯಾವ ವಿಷಯಗಳಿಗೆ ಪರೀಕ್ಷೆ ತೆಗೆದುಕೊಂಡಿದ್ದೀರೋ ಅವುಗಳಿಗೆ ಮಾತ್ರ ಪರೀಕ್ಷೆ ಬರೆಯಿರಿ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿರುವ ವಿಷಯದ ಜೊತೆಗೆ ಹೆಚ್ಚುವರಿ ವಿಷಯಗಳು ಮುದ್ರಣಗೊಂಡಿರುವುದು ಮಂಡಳಿಯ ಗಮನಕ್ಕೆ ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ, ತಾವು ನೋಂದಾಯಿಸಿಕೊಂಡಿರುವ ವಿಷಯಗಳ ಪರೀಕ್ಷೆಗೆ ಮಾತ್ರ ಹಾಜರಾಗಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿದೆ. ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್​ಸೈಟ್ https://kseab.karnatala.gov.in ನಲ್ಲಿ ಪಡೆಯಬಹುದಾಗಿದೆ. ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್​ಲೈನ್​ನಲ್ಲಿ ಪಡೆಯಬಹುದು.

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಮೇ 16ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 32,848 ವಿದ್ಯಾರ್ಥಿಗಳು ಫಲಿತಾಂಶವನ್ನು ಉನ್ನತೀಕರಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದು, 27,092 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳ ಸಂಖ್ಯೆ 89,221 ಇದೆ. 139 ವಿದ್ಯಾರ್ಥಿಗಳು ಶೇ.75 ರಷ್ಟು ಹಾಜರಾತಿ ಇಲ್ಲದ ಹಾಗೂ 17 ವರ್ಷ ತುಂಬಿದವರಾಗಿದ್ದು ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಒಟ್ಟು 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಸೇರಿ 1,49,300 ಅಭ್ಯರ್ಥಿಗಳು ಪರೀಕ್ಷೆ 2ಕ್ಕೆ ಹಾಜರಾಗುತ್ತಿದ್ದಾರೆ. ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 301 ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬಿಎಂಟಿಸಿ ಕಡೆಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮಗಳ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ಇದನ್ನೂ ಓದಿ: ಗುಡ್​​​ ನ್ಯೂಸ್​: ದ್ವಿತೀಯ ಪಿಯುಸಿ ಪರೀಕ್ಷೆ- 2 ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ - FREE TRAVEL

ETV Bharat Logo

Copyright © 2025 Ushodaya Enterprises Pvt. Ltd., All Rights Reserved.