ETV Bharat / state

ರಾಜ್ಯದ 14 ಲೋಕಸಭಾ ಸ್ಥಾನಗಳಿಗೆ ಮತದಾನ ಶುರು: ಸಿದ್ದಗಂಗಾ ಶ್ರೀ ಮತದಾನ - Second phase polling

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಮತದಾನ ಶುರುವಾಗಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಿದ್ದಗಂಗಾ ಶ್ರೀ ಮತದಾನ ಮಾಡಿದರು.

LIVE Update: ರಾಜ್ಯದ 14 ಲೋಕಸಭಾ ಸ್ಥಾನಗಳಿಗೆ ಮತದಾನ ಶುರು

author img

By ANI

Published : Apr 26, 2024, 7:11 AM IST

Updated : Apr 26, 2024, 7:35 AM IST

ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ಕರ್ನಾಟಕದ 14 ಕ್ಷೇತ್ರ ಸೇರಿ 13 ರಾಜ್ಯಗಳ 88 ಸಂಸದೀಯ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಿದ್ದಗಂಗಾ ಶ್ರೀ ಮತದಾನ ಮಾಡಿದರು.

ರಾಜ್ಯದಲ್ಲಿ ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಮಂಗಳೂರು ಸೇರಿ ಎಲ್ಲ ಕ್ಷೇತ್ರಗಳಲ್ಲಿ ಮತಗಟ್ಟೆಗಳತ್ತ ಜನರು ಆಗಮಿಸಿ, ಕ್ಯೂನಲ್ಲಿ ನಿಂತು ಮತಚಲಾಯಿಸುತ್ತಿದ್ದಾರೆ.

ಎರಡನೇ ಹಂತದಲ್ಲಿಕರ್ನಾಟಕದ ಹಳೆ ಮೈಸೂರು, ಬೆಂಗಳೂರು ಭಾಗದ 14 ಲೋಕಸಭೆ ಕ್ಷೇತ್ರಗಳು ಸೇರಿ ದೇಶದ ವಿವಿಧೆಡೆಯ ಒಟ್ಟು 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಹೊರತುಪಡಿಸಿ ಅಸ್ಸಾಂ-5, ಬಿಹಾರ-5, ಛತ್ತೀಸ್‌ಗಢ-3, ಕೇರಳ-20, ಮಧ್ಯಪ್ರದೇಶ-6, ಮಹಾರಾಷ್ಟ್ರ-8, ಮಣಿಪುರ-1, ರಾಜಸ್ಥಾನ-13, ತ್ರಿಪುರಾ-1, ಉತ್ತರ ಪ್ರದೇಶ-8, ಪಶ್ಚಿಮ ಬಂಗಾಳ-3 ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾರರು ಮತಹಕ್ಕು ಚಲಾಯಿಸುತ್ತಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಒಟ್ಟು 24 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ಪಿ.ಸಿ.ಮೋಹನ್, ಕಾಂಗ್ರೆಸ್​​​ನಿಂದ ಮನ್ಸೂರ್ ಅಲಿ ಖಾನ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. 10 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಬೆಂಗಳೂರು ಲೋಕಸಭೆ ಕ್ಷೇತ್ರದಲ್ಲಿ ಒಟ್ಟು 24,33,751 ಮತದಾರರು ಇದ್ದಾರೆ. ಈ ಪೈಕಿ ಪುರುಷ ಮತದಾರರು 12,54,642, ಮಹಿಳಾ ಮತದಾರರು 11,78,642 ಮತ್ತು ಇತರ 467 ಮತದಾರರು ಇದ್ದಾರೆ. ಕ್ಷೇತ್ರದಲ್ಲಿ ಒಟ್ಟು 2,125 ಮತಗಟ್ಟೆಗಳು ಇವೆ. 2019ರ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ 54.32% ಮತದಾನ ಆಗಿತ್ತು.

ಸರ್ವಜ್ಞನಗರ, ಗಾಂಧಿನಗರ, ಚಾಮರಾಜಪೇಟೆ, ಶಿವಾಜಿನಗರ, ಶಾಂತಿನಗರ, ರಾಜಾಜಿನಗರ, ಸಿ.ವಿ.ರಾಮನ್ ನಗರ ಹಾಗೂ ಮಹದೇವಪುರ ವಿಧಾನಸಭೆ ಕ್ಷೇತ್ರಗಳು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.

ಇದನ್ನೂ ಓದಿ: ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ಮತದಾನ: ಮತಗಟ್ಟೆಗಳತ್ತ ಬರುತ್ತಿರುವ ಜನರು - Lokasabha Election 2024

Last Updated : Apr 26, 2024, 7:35 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.