ETV Bharat / state

ITI, Diploma ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ: ರಾಜ್ಯ ಕೌಶಾಲ್ಯಾಭಿವೃದ್ಧಿ ನಿಗಮದಿಂದ ಹೊಸ ಮುನ್ನುಡಿ - Overseas job opportunity - OVERSEAS JOB OPPORTUNITY

ವಿದೇಶದಲ್ಲಿ ಉದ್ಯೋಗ ಬಯಸುವವರಿಗಾಗೇ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮವು ಹೊಸ ಯೋಜನೆ ಜಾರಿಗೆ ತಂದಿದೆ. ವಿದೇಶದಲ್ಲಿ ಖಾಲಿ ಇರುವ ಉದ್ಯೋಗದ ಮಾಹಿತಿ ಜೊತೆಗೆ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ವಿದೇಶಕ್ಕೆ ಕಳುಹಿಸುವ ಕಾರ್ಯವನ್ನು ಇಲಾಖೆ ಮಾಡುತ್ತಿದೆ.

ಯುವಕರನ್ನು ವಿದೇಶಕ್ಕೆ ಬೀಳ್ಕೊಡುಗೆ ಸಮಾರಂಭದಲ್ಲಿ ಸಚಿವರು
ಯುವಕರನ್ನು ವಿದೇಶಕ್ಕೆ ಬೀಳ್ಕೊಡುಗೆ ಸಮಾರಂಭದಲ್ಲಿ ಸಚಿವರು (ETV Bharat)
author img

By ETV Bharat Karnataka Team

Published : Jun 22, 2024, 4:09 PM IST

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ರಾಜ್ಯದ ಯುವಕರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಬಿಇ, ಡಿಪ್ಲೋಮಾ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಸ್ಲೋವಾಕಿಯಾ ರಾಷ್ಟ್ರದಲ್ಲಿ ಉದ್ಯೋಗ ಕೊಡಿಸುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮ ಯಶಸ್ವಿಯಾಗಿದೆ.

ಯುವಕರ ಕೌಶಲ್ಯ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳ ಬಗ್ಗೆ ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ.

ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೋವಾಕಿಯಾ ರಾಷ್ಟ್ರ ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್​​ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು. ಸ್ಲೋವಾಕಿಯಾ ರಾಷ್ಟ್ರ 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳನ್ನು (54 ಮಂದಿ ಐಟಿಐ, 31 ಮಂದಿ ಡಿಪ್ಲೋಮಾ) ಆ ದೇಶಕ್ಕೆ ಬೀಳ್ಕೊಡಲಾಗಿದೆ.

ಇದನ್ನೂ ಓದಿ: ಪಿಯುಸಿ, ಡಿಪ್ಲೊಮಾ ಅರ್ಹತೆ; ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ 320 ನಾವಿಕ್, ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ - Indian Coast Guard Jobs 2024

ಉಚಿತ ತರಬೇತಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಡದಿ ಸಮೀಪ ಇರುವ ಟೊಯೋಟಾ ಕಿರ್ಲೋಸ್ಕರ್​​ನಲ್ಲಿ ತರಬೇತಿ ನೀಡಲಾಯಿತು. ತರಬೇತಿ ಪಡೆದ ನಂತರ ಸ್ಲೋವಾಕಿಯಾದಲ್ಲಿ ಇವರಿಗೆ ತಿಂಗಳಿಗೆ 970 ಯೂರೋ (86 ಸಾವಿರ ರೂ.) ವೇತನ ನೀಡಲಾಗುತ್ತಿದೆ. ಜೂನ್ 5ರಂದು ಮೊದಲ ತಂಡ ಹಾಗೂ ಜೂ.20ರಂದು 2ನೇತಂಡವನ್ನು ಬೀಳ್ಕೊಡಲಾಗಿದೆ. ಜೂ.24 ಮತ್ತು ಜು.1ರಂದು ಉಳಿದ ತಂಡಗಳು ಸ್ಲೋವಾಕಿಯಾಕ್ಕೆ ತೆರಳಲಿವೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಕೆಎಸ್‍ಡಿಸಿ ಇದೀಗ 37 ಚಾಲಕರನ್ನು ಹಂಗೇರಿಗೆ ದೇಶಕ್ಕೆ ಕಳುಹಿಸಿಕೊಟ್ಟಿದೆ. ಅಲ್ಲದೆ ಮಾರಿಷಸ್‍ಗೆ ವೆಲ್ಡರ್‍ಗಳು, ಬಾಯ್ಲರ್ ತಯಾರಕರು ಮತ್ತು ಇತರ ಬ್ಲೂ ಕಾಲರ್ ಕೆಲಸಗಳಿಗಾಗಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಆಸ್ಟ್ರೇಲಿಯಾ, ಜಪಾನ್, ಫಿನ್ಲ್ಯಾಂಡ್, ಜರ್ಮನಿ, ನಾರ್ವೆಯಲ್ಲಿನ ದಾದಿಯರ ಬೇಡಿಕೆಯನ್ನು ಪೂರೈಸಲು ಮುಂದಾಗಿದೆ. ಅಲ್ಲದೆ ಸ್ಲೋವಾಕಿಯಾ ಕೂಡ ಹೆಚ್ಚುವರಿಯಾಗಿ ದೊಡ್ಡ ಸಂಖ್ಯೆಯ ಆಪರೇಟರ್​ಗಳನ್ನು ಕೇಳಿದೆ. ಜೊತೆಗೆ ಗಲ್ಫ್ ಮತ್ತು ಯುರೋಪ್ ರಾಷ್ಟ್ರಗಳಿಂದಲೂ ಬೇಡಿಕೆಗಳು ಬಂದಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತಿದ್ದೇವೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಈ ಕ್ಷೇತ್ರದಲ್ಲಿ ಯುವಜನತೆಗೆ ಭಾರೀ ಬೇಡಿಕೆ: 1 ಮಿಲಿಯನ್​ ಉದ್ಯೋಗ ಸೃಷ್ಟಿ ಎಂದ ತಜ್ಞರು - Hospitality Industry

ETV Bharat Logo

Copyright © 2024 Ushodaya Enterprises Pvt. Ltd., All Rights Reserved.