ETV Bharat / state

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ರಿಸಲ್ಟ್​ ಹೀಗೆ ನೋಡಬಹುದು - SSLC Result

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯಾವ ಅಂತರ್ಜಾಲದಲ್ಲಿ ನೋಡಬಹುದು ಎಂಬ ಮಾಹಿತಿ ಇಲ್ಲಿದೆ.

SSLC RESULTS
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ETV Bharat)
author img

By ETV Bharat Karnataka Team

Published : May 8, 2024, 1:48 PM IST

Updated : May 9, 2024, 7:10 AM IST

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ‌.

ಮಾರ್ಚ್/ಏಪ್ರಿಲ್ 2024ರ ಎಸ್​ಎಸ್​ಎಲ್​ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಇದೇ ಸಂದರ್ಭದಲ್ಲಿ ಪರೀಕ್ಷೆ-2ರ ವಿವರ ಇತ್ಯಾದಿಗಳ ಮಾಹಿತಿಯನ್ನು ಕೂಡ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

ಇನ್ನು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಇದನ್ನೂ ಓದಿ: ಎಸ್​ಎಸ್ಎಲ್​ಸಿ ಪರೀಕ್ಷಾ ನಿಯಮ ಉಲ್ಲಂಘನೆ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು - Two Headmasters Suspended

Last Updated : May 9, 2024, 7:10 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.