ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆಯಾಗಿದ್ದಾರೆ. ರಾಜ್ಯ ಖಜಾಂಚಿಯಾಗಿ ಶಿವರುದ್ರಯ್ಯ ಗೆದ್ದರು.
2024-29ನೇ ಅವಧಿಯ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಕಬ್ಬನ್ ಪಾರ್ಕ್‌ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಿತು. ಬಳಿಕ ನಡೆದ ಮತ ಎಣಿಕೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್.ಷಡಕ್ಷರಿ 507 ಮತ ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಬಿ.ಪಿ.ಕೃಷ್ಣಗೌಡ ವಿರುದ್ಧ 64 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ರಾಜ್ಯ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಿವರುದ್ರಯ್ಯ ವಿ.ವಿ ಅವರು 485 ಮತ ಪಡೆಯುವ ಮೂಲಕ ನಾಗರಾಜ ಆರ್.ಜುಮ್ಮನ್ನವರ ಎದುರು 18 ಮತಗಳ ಅಂತರದಲ್ಲಿ ಜಯಿಸಿದ್ದಾರೆ.