ETV Bharat / state

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರದ ಮುನ್ಸೂಚನೆ; 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - Karnataka Weather Report - KARNATAKA WEATHER REPORT

ರಾಜ್ಯದಲ್ಲಿ ಮಳೆರಾಯ ಮತ್ತೆ ಆರ್ಭಟಿಸಲಿದ್ದು, 9 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

KARNATAKA WEATHER REPORT
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Sep 26, 2024, 7:09 AM IST

Updated : Sep 26, 2024, 9:00 AM IST

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊನೆಗೊಳ್ಳಲು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಇದರ ನಡುವೆ ಮುಂದಿನ 24 ಗಂಟೆಗಳ ಕಾಲ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್​, ಕಲಬುರಗಿ, ವಿಜಯಪುರ ಜಿಲ್ಲೆ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಬೀಳಲಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಹಾಗೂ ತುಮಕೂರಿನಲ್ಲಿ ಗುಡುಗುಸಹಿತ ಸಾಧಾರಣ ವರ್ಷಧಾರೆಯಾಗಲಿದೆ.

ಸೆಪ್ಟಂಬರ್ 28ರಿಂದ ರಾಜ್ಯಾದ್ಯಂತ ಮಳೆ ಕಡಿಮೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಚಿಕ್ಕಮಗಳೂರಿನ ಮೂಡಿಗೆರೆ, ದಕ್ಷಿಣ ಕನ್ನಡದ ಮಂಗಳೂರು, ಯಾದಗಿರಿ, ಕಲಬುರಗಿ ಸೇರಿ ರಾಜ್ಯದ ಕೆಲವೆಡೆ ಬುಧವಾರ ವರ್ಷಧಾರೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ವಿಶ್ವ ಶ್ವಾಸಕೋಶ ದಿನಾಚರಣೆ: ಧೂಮಪಾನಿಗಳಲ್ಲದವರಲ್ಲಿ ಕ್ಯಾನ್ಸರ್​ಗೆ ಮುಖ್ಯ ಕಾರಣ ಇದು - World Lung Day

Last Updated : Sep 26, 2024, 9:00 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.