ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟಂಬರ್ 21ರ ನಂತರ ಮತ್ತೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಉತ್ತರ ಕನ್ನಡದ ಕುಮಟಾ, ಮಂಗಳೂರು ನಗರ, ಪಣಂಬೂರು, ಬೆಳಗಾವಿ ಲೋಂಡಾ, ಕೊಡಗಿನ ಪೊನ್ನಂಪೇಟೆ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಎಚ್‌ಎಂಎಸ್‌ನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ನಗರದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.