ETV Bharat / state

ಬಜೆಟ್‌ನಲ್ಲಿ ಕರ್ನಾಟಕದ ನಿರ್ಲಕ್ಷ್ಯ: ನೀತಿ ಆಯೋಗದ ಸಭೆ ಬಹಿಷ್ಕರಿಸಲು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ - NITI Aayog Meeting - NITI AAYOG MEETING

ಬಜೆಟ್​​ನಲ್ಲಿ ರಾಜ್ಯದ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿ ಖಂಡಿಸಿ, ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

cm siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jul 24, 2024, 6:39 AM IST

ಬೆಂಗಳೂರು: ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾದ ನೀತಿ ಆಯೋಗದ ಸಭೆ ಬಹಿಷ್ಕರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ 'ಎಕ್ಸ್' ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟರೂ, ಮಂಗಳವಾರ ಮಂಡಿಸಲಾದ ಕೇಂದ್ರ ಬಜೆಟ್​​​ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕೇಂದ್ರದ ಈ ಉದ್ದೇಶಪೂರ್ವಕ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ' ಎಂದು ತಿಳಿಸಿದ್ದಾರೆ.

'2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್​​ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು, ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ-ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ' ಎಂದು ದೂರಿದ್ದಾರೆ.

'ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್​​ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರ ನಿರ್ಧಾರ ಮಾಡಿದಂತಿದೆ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ದೇಶದಲ್ಲಿ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರ ಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ' ಎಂದು ಟೀಕಿಸಿದ್ದಾರೆ.

'ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ' ಎಂದಿದ್ದಾರೆ.

ಇದನ್ನೂ ಓದಿ: ಕೇಂದ್ರದ ಬಜೆಟ್ ಜನವಿರೋಧಿಯಾಗಿದೆ, ನಿರ್ಮಲಾ ಸೀತಾರಾಮನ್‌ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ - cm siddaramaiah

ETV Bharat Logo

Copyright © 2025 Ushodaya Enterprises Pvt. Ltd., All Rights Reserved.