ETV Bharat / state

ಬಜೆಟ್​ನಲ್ಲಿ ಸೂಕ್ಷ್ಮ, ಸಣ್ಣ ಕೈಗಾರಿಕೆಗಳ ಸಂಪೂರ್ಣ ನಿರ್ಲಕ್ಷ್ಯ: ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ

ರಾಜ್ಯದಲ್ಲಿನ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳನ್ನು ಸಿಎಂ ಸಿದ್ದರಾಮಯ್ಯ ಸಂಪೂರ್ಣವಾಗಿ ನಿರ್ಲಕ್ಷಿಸಿದಂತೆ ತೋರುತ್ತಿದೆ ಎಂದು ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ತಿಳಿಸಿದ್ದಾರೆ.

ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ
ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ
author img

By ETV Bharat Karnataka Team

Published : Feb 16, 2024, 10:21 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2024-25ನೇ ಸಾಲಿನ ಆಯವ್ಯಯದಲ್ಲಿ ಎಂ.ಎಸ್.ಎಂ.ಇಗಳಿಗೆ ಏನನ್ನೂ ನೀಡಿಲ್ಲ. ರಾಜ್ಯದಲ್ಲಿನ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದಂತೆ ತೋರುತ್ತಿದೆ ಎಂದು ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ಕೃಷಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಚಿಂತನೆಯ ಅಭಿವೃದ್ಧಿ ಆಯವ್ಯಯ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಕೈಗಾರಿಕಾ ವಸಾಹತುಗಳ ಉನ್ನತೀಕರಣದ ಪ್ರಸ್ತಾವನೆಯನ್ನು ಸ್ವಾಗತಿಸುತ್ತೇನೆ ಎಂದು ಇದೇ ವೇಳೆ ಹೇಳಿದರು.

ಇತರ ಪ್ರಮುಖ ಪ್ರಸ್ತಾಪಗಳಾದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಐಪಿಒ ವೆಚ್ಚಗಳಿಗೆ ಸಹಾಯಧನ, ಟ್ರೆಡ್ಸ್ ವೇದಿಕೆಯಲ್ಲಿ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಭಾಗವಹಿಸುವಿಕೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದು ಎಂ.ಎಸ್.ಎಂ.ಇ.ಗಳಿಗೆ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳಿಂದ ಬರಬೇಕಾದ ಬಾಕಿಯನ್ನು ಕಾಲಮಿತಿಯೊಳಗೆ ಪಡೆಯಲು ಅನುಕೂಲವಾಗುತ್ತದೆ. ಬೇರೆ ರಾಜ್ಯಗಳು ಈಗಾಗಲೇ ಈ ವೇದಿಕೆಯಲ್ಲಿ ಇಲಾಖೆಗಳ ಮತ್ತು ಸಾರ್ವಜನಿಕ ಉದ್ದಿಮೆಗಳ ಭಾಗವಹಿಸುವಿಕೆಯನ್ನು ಕಡ್ಡಾಯಗೊಳಿಸಿವೆ ಎಂದಿದ್ದಾರೆ.

ಆಯವ್ಯಯದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಮತ್ತು ಕರ್ನಾಟಕದ ಇತರ ಜಿಲ್ಲೆಗಳಲ್ಲಿ 25 ಮಿನಿ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಹಲವಾರು ಇತರ ಉತ್ತಮ ಪ್ರಸ್ತಾಪಗಳೂ ಸಹ ಇವೆ. ಆದರೆ ಬಂಡವಾಳದ ವೆಚ್ಚಕ್ಕಾಗಿ ಪ್ರಸ್ತಾಪಿಸಿರುವ ಆಯವ್ಯಯದ ಹಂಚಿಕೆಯು ಕಾರ್ಯಗತಗೊಳಿಸಲು ಸಾಕಾಗುವುದಿಲ್ಲ. ಎಲೆಕ್ಟ್ರಿಕಲ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳು, ಸಾರ್ವಜನಿಕ ಸಾರಿಗೆಗಳ ಏಕೀಕರಣ, ತುಮಕೂರಿನವರೆಗೆ ಮೆಟ್ರೋ ವಿಸ್ತರಣೆ, ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಸುರಂಗ ಮಾರ್ಗಗಳ ನಿರ್ಮಾಣ ಸೇರಿದಂತೆ ಆರ್ಥಿಕತೆಯ ಬೆಳವಣಿಗೆಗೆ ಸಹಕಾರಿಯಾಗುವ ಪ್ರಸ್ತಾಪಗಳೂ ಸಹ ಬಜೆಟ್​​ನಲ್ಲಿರುವುದು ಸ್ವಾಗತಾರ್ಹ ಎಂದು ಹೇಳಿದರು.

ನೂತನ ಕೈಗಾರಿಕಾ ನೀತಿಯನ್ನು ರೂಪಿಸುವಾಗಲಾದರೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳನ್ನು ಗಮನದಲ್ಲಿ ಇಟ್ಟುಕೊಳ್ಳಲಿ ಎಂದು ಶಶಿಧರ ಶೆಟ್ಟಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಜೆಟ್​ನಲ್ಲಿ ಘೋಷಣೆಯಾದ ಹೊಸ ಯೋಜನೆಗಳೇನು? ಇಲ್ಲಿದೆ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.