ETV Bharat / state

ಕೆಪಿಎಸ್​ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ದೋಷ: ಮುಂದಿನ ಆದೇಶದವರೆಗೂ ಕ್ರಮಕ್ಕೆ ಮುಂದಾಗದಂತೆ ಕೆಎಟಿ ಆದೇಶ - KAT NOTICE TO KPSC

ಕೆಪಿಎಸ್​ಸಿ ಪೂರ್ವಭಾವಿ ಮರು ಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೂ ಯಾವುದೇ ಕ್ರಮಕ್ಕೆ ಮುಂದಾಗದಂತೆ ಕೆಪಿಎಸ್​ಸಿಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ನಿರ್ದೇಶನ ನೀಡಿದೆ.

KARNATAKA ADMINISTRATIVE TRIBUNAL
ಕರ್ನಾಟಕ ಆಡಳಿತ ನ್ಯಾಯಮಂಡಳಿ (ETV Bharat)
author img

By ETV Bharat Karnataka Team

Published : Jan 28, 2025, 10:29 PM IST

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್​ಸಿ)ಕಳೆದ 384 ಹುದ್ದೆಗಳ ಭರ್ತಿಗೆ ಡಿಸೆಂಬರ್ 29ರಂದು ನಡೆಸಿದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ದೋಷಗಳಾಗಿರುವ ಹಿನ್ನೆಲೆ, ಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೂ ಯಾವುದೇ ಕ್ರಮಕ್ಕೆ ಮುಂದಾಗದಂತೆ ಕೆಪಿಎಸ್​ಸಿಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ನಿರ್ದೇಶನ ನೀಡಿದೆ.

ಕೃಷ್ಣ ಮತ್ತಿತರರು ಸಲ್ಲಿಸಿದ್ದ ಅರ್ಜಿ ಮಂಗಳವಾರ ನ್ಯಾಯಾಂಗ ಸದಸ್ಯ ಎಸ್.ವೈ. ವಟವಟಿ ಮತ್ತು ಆಡಳಿತ ಸದಸ್ಯೆ ಡಾ. ಅಮಿತಾ ಪ್ರಸಾದ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ, ಕೆಪಿಎಸ್‌ಸಿಯ ಅಭಿಪ್ರಾಯ ಆಲಿಸದೇ ಯಾವುದೇ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ನಿರಾಕರಿಸಿತು. ಆದರೆ, ಸರ್ಕಾರದ ಮತ್ತು ಕೆಪಿಎಸ್‌ಸಿ ಪರ ವಕೀಲರಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆ ವೇಳೆಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿತು.

ಅಲ್ಲದೇ, ಮುಂದಿನ ವಿಚಾರಣೆವರೆಗೆ ಪರೀಕ್ಷೆ ಸಂಬಂಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕೆಪಿಎಸ್‌ಸಿಗೆ ನಿರ್ದೇಶನ ನೀಡಿ ವಿಚಾರಣೆ ಜ.30ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಪೂರ್ವಭಾವಿ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಅನುವಾದದಲ್ಲಿ ಮತ್ತೆ ಲೋಪಗಳಾಗಿವೆ. ಇದರಿಂದಾಗಿ ಕನ್ನಡ ಮಾಧ್ಯಮದ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ ಪರೀಕ್ಷೆಯನ್ನು ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ನಿರ್ದೇಶನ ನೀಡಬೇಕು. ಮಧ್ಯಂತರ ಕ್ರಮವಾಗಿ ಫಲಿತಾಂಶ ಪ್ರಕಟಣೆಗೆ ತಡೆ ನೀಡಬೇಕು ಎಂದು ನ್ಯಾಯಮಂಡಳಿಯನ್ನು ಕೋರಿದರು.

ಪ್ರಕರಣದ ಹಿನ್ನೆಲೆ ಏನು? : ಕಳೆದ ಆ.27ರಂದು ಕೆಪಿಎಸ್‌ಸಿ 384 ಕೆಎಎಸ್ ಹುದ್ದೆಗಳ ನೇಮಕಕ್ಕೆ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಅದರಲ್ಲಿ 2.10 ಲಕ್ಷ ಅರ್ಜಿ ಸಲ್ಲಿಸಿದ್ದವರ ಪೈಕಿ 1.21 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆಯ ಪ್ರಶ್ನೆಪತ್ರಿಕೆ ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡುವಲ್ಲಿ ದೊಡ್ಡ ಲೋಪಗಳು ಉಂಟಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸುವಂತೆ ಅಭ್ಯರ್ಥಿಗಳು ಆಯೋಗದ ಮೇಲೆ ಒತ್ತಡ ಹಾಕಿದ್ದರು. ಕೊನೆಗೆ ಸರ್ಕಾರವೇ ಆಯೋಗಕ್ಕೆ ಪೂರ್ವಭಾವಿ ಪರೀಕ್ಷೆ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆ ಬರೆಯಲು ಆದೇಶ ನೀಡಿತ್ತು.

ಅದರಂತೆ ಆಯೋಗ ಡಿ.29ಕ್ಕೆ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 553 ಪರೀಕ್ಷಾ ಕೇಂದ್ರಗಳಲ್ಲಿಪರೀಕ್ಷೆ ನಡೆಸಿತ್ತು. 2.10 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 1.05 ಲಕ್ಷ (ಶೇ.47.7) ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಯೋಗ ತಿಳಿಸಿದೆ. ಅ ಪರೀಕ್ಷೆಯಲ್ಲೂ ಸಹ ಸುಮಾರು 59 ಪ್ರಶ್ನೆಗಳ ಅನುವಾದದಲ್ಲಿ ದೋಷಗಳಾಗಿವೆ, ಹಾಗಾಗಿ ಪರೀಕ್ಷೆ ರದ್ದುಗೊಳಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮತ್ತೊಮ್ಮೆ ಕೆಎಎಸ್​ ಪೂರ್ವಭಾವಿ ಪರೀಕ್ಷೆಗೆ ಕೋರಿ ಅರ್ಜಿ: ಸರ್ಕಾರ, ಕೆಪಿಎಸ್​ಸಿಗೆ ಹೈಕೋರ್ಟ್ ನೋಟಿಸ್

ಇದನ್ನೂ ಓದಿ: KPSC ನೇಮಕಾತಿ; ಪಿಡಬ್ಲ್ಯೂಡಿ ಹುದ್ದೆ ಭರ್ತಿಗೆ ಅಧಿಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.