ETV Bharat / state

110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ 5ನೇ ಹಂತದ ಯೋಜನೆ ನಾಳೆ ಲೋಕಾರ್ಪಣೆ

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಭವಿಷ್ಯದ ದೂರದೃಷ್ಟಿಯನ್ನಿಟ್ಟುಕೊಂಡು ಅನುಷ್ಠಾನಗೊಳಿಸಿದ ಮಹತ್ವದ ಯೋಜನೆ ಇದಾಗಿದೆ.

author img

By ETV Bharat Karnataka Team

Published : 7 hours ago

Kaveri 5th phase project to supply drinking water to 110 villages will be inaugurated tomorrow
ಯೋಜನೆಯನ್ನು ಪರಿವೀಕ್ಷಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ (ETV Bharat)

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅಕ್ಟೋಬರ್ 16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೆ ಸಿದ್ಧವಾಗಿದೆ.

ಜೈಕಾ (ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4,336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2004ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದಾಗಿದೆ.

ಈ ಯೋಜನೆಯಿಂದ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 775 ಎಂಎಲ್‌ಡಿ ನೀರು ಪೂರೈಕೆಯಾಗಲಿದ್ದು, ಮೂಲೆಮೂಲೆಗೂ ಕಾವೇರಿ ನೀರು ಸರಬರಾಜಾಗಲಿದೆ. ಇದರಿಂದ ಹೆಚ್ಚುವರಿಯಾಗಿ 50 ಲಕ್ಷ ಜನರು ಇದರ ಸದುಪಯೋಗಪಡೆದುಕೊಳ್ಳಲಿದ್ದಾರೆ. ವೇಗವಾಗಿ ಬೆಳೆಯುತ್ತಿರುವ ಮಹಾನಗರಿ ಬೆಂಗಳೂರಿನ ಭವಿಷ್ಯದ ದೂರದೃಷ್ಟಿಯನ್ನಿಟ್ಟುಕೊಂಡು ಅನುಷ್ಠಾನಗೊಳಿಸಿದ ಮಹತ್ವದ ಯೋಜನೆ ಇದಾಗಿದೆ. ಇದರಿಂದ 110 ಹಳ್ಳಿಗಳ ನಿವಾಸಿಗಳಿಗೆ ಹಾಗೂ ಬೆಂಗಳೂರು ನಗರದ ಎಲ್ಲ ನಿವಾಸಿಗಳಿಗೆ ಸಮರ್ಪಕ ನೀರು ಸರಬರಾಜಾಗಲಿದೆ.

ಜಲಮಂಡಳಿ ಅಧಿಕಾರಿಗಳ ಮಾಹಿತಿ: ಕಾವೇರಿ ಐದನೇ ಹಂತದ ಲೋಕಾರ್ಪಣೆಯನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ(ಟಿ.ಕೆ.ಹಳ್ಳಿ)ಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ಅಕ್ಟೋಬರ್ 17ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ. ಕಾರ್ಯಕ್ರಮದಲ್ಲಿ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ, ರಾಜ್ಯ ಸಚಿವರು ಹಾಗೂ ಸಂಸದರು ಮತ್ತು ಶಾಸಕರು ಸೇರಿದಂತೆ ಇನ್ನೀತರ ಎಲ್ಲ ಚುನಾಯಿತ ಪ್ರತಿನಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಮನೆಮನೆಗೂ ಕಾವೇರಿ ನೀರು ತಲುಪಿಸಿ ಸಮೃದ್ಧ ಬೆಂಗಳೂರಿಗೆ ಕೈ ಜೋಡಿಸಿರುವ ಜೈಕಾ ಇಂಡಿಯಾ ಕಚೇರಿಯ ಮುಖ್ಯ ಪ್ರತಿನಿಧಿ ಟೇಕುಚಿ ಟಕುರೋ, ಕೌನ್ಸಲ್ ಜನರಲ್ ಆಫ್ ಜಪಾನ್ ಇನ್ ಇಂಡಿಯಾದ ಟ್ಸುಟೋಮು, ಭಾರತದಲ್ಲಿನ ಜಪಾನ್ ರಾಯಭಾರ ಕಚೇರಿಯ ಅಧಿಕಾರಿ ಹೊಕುಗೋ ಕ್ಯೋಕು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಯೋಜನೆಯನ್ನು ಪರಿವೀಕ್ಷಿಸಿದ್ದ ಡಿಕೆ ಶಿವಕುಮಾರ್: ಯೋಜನೆಯನ್ನು ವೇಗವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಖುದ್ದಾಗಿ ಟಿ.ಕೆ.ಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಲಹೆ - ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದರು.

ಯೋಜನೆ ರೂಪಿಸಿ ಚಾಲನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಕಾವೇರಿ 5ನೇ ಹಂತದ ಯೋಜನೆ ಮೂಲಕ ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಬೆಂಗಳೂರು ದಕ್ಷಿಣ, ಮಹದೇವಪುರ, ರಾಜರಾಜೇಶ್ವರಿನಗರ, ಕೆಆರ್ ಪುರಂ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳ ಮನೆ ಮನೆಗೂ ಹಾಗೂ ಬೆಂಗಳೂರು ನಗರದ ಎಲ್ಲೆಡೆ ಕಾವೇರಿ ನೀರು ಸಮರ್ಪಕ ಸರಬರಾಜು ಆಗಲಿದೆ ಎಂದು ಹೇಳಿದ್ದರು.

ನಗರದ ಮನೆ ಮನೆಗೂ ಕಾವೇರಿ ತಲುಪಿಸುವ ಬೆಂಗಳೂರು ಜಲಮಂಡಳಿಯ ಈ ಯೋಜನೆಯು ಶೀಘ್ರದಲ್ಲೇ ಬೆಂಗಳೂರನ್ನು ನೀರಿನ ಸಮಸ್ಯೆಯಿಂದ ಮುಕ್ತಿಗೊಳಿಸಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಪ್ರತಿಯೊಂದು ಮನೆಗೂ ಸಮರ್ಪಕ ನೀರು ಹರಿಸುವುದು ಜಲಮಂಡಳಿಯ ಗುರಿಯಾಗಿದೆ ಎಂದಿದ್ದರು.

ಕೊಳವೆ ಬಾವಿಗಳು ಬತ್ತಿಹೋದ ಪರಿಣಾಮವಾಗಿ ಈ ಬಾರಿ ಬೇಸಿಗೆಯಲ್ಲಿ ಬಹಳಷ್ಟು ತೊಂದರೆಯನ್ನು ನಮ್ಮ ನಗರದ ನಾಗರೀಕರು ಅನುಭವಿಸಬೇಕಾಯಿತು. ಈ ಸಂದರ್ಭದಲ್ಲಿ ಜಲಮಂಡಳಿಯ ಎಲ್ಲಾ ಸಿಬ್ಬಂದಿ ಹಗಲು ರಾತ್ರಿ ಶ್ರಮವಹಿಸಿ ಇದನ್ನ ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ಪರಿಸ್ಥಿತಿ ಮತ್ತೊಮ್ಮೆ ಮರುಕಳಿಸಿದಂತೆ ಅಗತ್ಯ ಸಿದ್ದತೆಗಳನ್ನು ಜಲಮಂಡಳಿ ಮಾಡುತ್ತಿದೆ. ಹಲವಾರು ಸುಸ್ಥಿರ ಯೋಜನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ನಗರವನ್ನು ವಾಟರ್ ಸರ್‌ಪ್ಲಸ್ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಡಿಸಿಎಂ ತಿಳಿಸಿದ್ದರು.

ಇದನ್ನೂ ಓದಿ: ಕುಡಿಯುವ ನೀರು ಕಲುಷಿತಗೊಳ್ಳದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ - Priyank Kharge

ETV Bharat Logo

Copyright © 2024 Ushodaya Enterprises Pvt. Ltd., All Rights Reserved.