ಬೆಂಗಳೂರು: ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
ಕೆಇಎ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಿ ನಿಗದಿತ ಲಿಂಕ್ ಆಯ್ಕೆ ಮಾಡಿ, ಅರ್ಜಿ ಸಂಖ್ಯೆ ಮತ್ತು ಅರ್ಜಿದಾರರ ಹೆಸರು (ಮೊದಲ ನಾಲ್ಕು ಅಕ್ಷರಗಳು) ನಮೂದಿಸಿ, ಡಿಸಿಇಟಿ-2024ರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೇಶಪತ್ರದ ಜೊತೆಗೆ ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುವ ವಸ್ತ್ರ ಸಂಹಿತೆಯನ್ನು ತಪ್ಪದೆ ಅನುಸರಿಸಲು ಸೂಚಿಸಲಾಗಿದೆ. ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ.
ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ - UG NEET