ETV Bharat / state

ನಾಳೆ ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆ: 'ಕೆಇಎ'ಯಿಂದ ಸಕಲ ಸಿದ್ಧತೆ - KSET EXAM PREPARATION

ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ-ಸೆಟ್ ಮತ್ತು ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ಬಿಗಿ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಮಾಹಿತಿ ನೀಡಿದ್ದಾರೆ.

ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆಗೆ 'ಕೆಇಎ'ಯಿಂದ ಸಕಲ ಸಿದ್ಧತೆ
ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆಗೆ 'ಕೆಇಎ'ಯಿಂದ ಸಕಲ ಸಿದ್ಧತೆ (ETV Bharat)
author img

By ETV Bharat Karnataka Team

Published : Nov 23, 2024, 7:15 AM IST

ಬೆಂಗಳೂರು: "ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್​​ ಹಾಗೂ ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಭಾನುವಾರ (ನವೆಂಬರ್ 24ಕ್ಕೆ) ನಡೆಯಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ" ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

"ಒಟ್ಟು 41 ವಿಷಯಗಳಿಗೆ ನಡೆಯುವ ಕೆ-ಸೆಟ್​ ಪರೀಕ್ಷೆಯನ್ನು 1.05 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 12 ಜಿಲ್ಲೆಗಳ (ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ) 252 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯನ್ನು 2,000 ಮಂದಿ ತೆಗೆದುಕೊಂಡಿದ್ದು, ಕೇವಲ ಬೆಂಗಳೂರು ನಗರದ ಮೂರು ಕೇಂದ್ರಗಳಲ್ಲಿ ನಡೆಯಲಿದೆ" ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ ಎರಡೂ ಪತ್ರಿಕೆಗಳ (ಪತ್ರಿಕೆ 1 ಮತ್ತು 2) ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕಾಗುತ್ತದೆ. ಎರಡೂ ಪತ್ರಿಕೆಗಳಿಗೆ ಪ್ರತ್ಯೇಕ ಓಎಂಆರ್​​ ನೀಡುತ್ತಿದ್ದು, ಆಯಾ ಓಎಂಆರ್​ನಲ್ಲೇ ಅದರ ಉತ್ತರಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕಿದೆ. ಅಭ್ಯರ್ಥಿಗಳು ಅಭ್ಯಾಸದ ಸಲುವಾಗಿ ಪ್ರವೇಶ ಪತ್ರದ ಜತೆ ಡೌನ್‌ ಲೋಡ್‌ ಮಾಡಿಕೊಂಡಿದ್ದ ಮಾದರಿ ಓಎಂಆರ್‌ ಶೀಟ್‌ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ" ಎಂದು ಎಚ್ಚರಿಸಿದ್ದಾರೆ.

"ರಾಯಚೂರು ವಿವಿ ಪರೀಕ್ಷೆಗೆ ಮಾತ್ರ ನೆಗೆಟಿವ್​ ಮೌಲ್ಯಮಾಪನ ಇರುತ್ತದೆ. ಕೆ-ಸೆಟ್‌ ಪರೀಕ್ಷೆಗೆ ಆ ರೀತಿ ಇರುವುದಿಲ್ಲ. ಈ ಹಿಂದಿನ ಎಲ್ಲ ಪರೀಕ್ಷೆಗಳ ಹಾಗೆಯೇ ಈ ಪರೀಕ್ಷೆಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಅಭ್ಯರ್ಥಿಗಳು ಪಾಲಿಸಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳನ್ನು ತೀವ್ರ ಶೋಧ ನಡೆಸಿಯೇ ಒಳ ಬಿಡಲಾಗುತ್ತದೆ. ಇದಕ್ಕೆ ಅಗತ್ಯ ಪೊಲೀಸ್‌ ಮತ್ತು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ" ಎಂದು ಹೆಚ್. ಪ್ರಸನ್ನ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಐಟಿ-ಬಿಟಿ ಇಲಾಖೆಯಿಂದ 'ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ' ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.