ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಕ್ಕೆ ಆಗಸ್ಟ್ 11ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಜು. 20ರಂದು ಪ್ರಾಧಿಕಾರ ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಗೆ ಗೈರಾದವರಿಗೆ ಈ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.
ಬಿಎಂಟಿಸಿ (ನಾನ್ ಎಚ್ಕೆ) ಪರೀಕ್ಷೆ ಸೆ. 1ರಂದು, ಪಿಎಸ್ಐ ಪರೀಕ್ಷೆ ಸೆ. 22ರಂದು, ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ. 29ರಂದು ನಡೆಯಲಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪ್ರಮುಖ ಪರೀಕ್ಷೆ ಅಕ್ಟೋಬರ್ 27ರಂದು ನಡೆಸಲಾಗುವುದು.
ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಕೆಇಎ ವೆಬ್ಸೈಟ್ಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಇಎ ಅಧಿಸೂಚನೆ: ಕೆಸೆಟ್ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ - KEA Notification For KSet