ETV Bharat / state

ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ; 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಆಪ್ಷನ್ ಎಂಟ್ರಿ - Admission For Professional Courses - ADMISSION FOR PROFESSIONAL COURSES

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ್ದು, ಇದೇ ಮೊದಲ ಬಾರಿಗೆ ಆನ್​ಲೈನ್ ಮೂಲಕ​ ಶುಲ್ಕ ಪಾವತಿಗೆ ಅವಕಾಶ ನೀಡಿದೆ. ಮೊದಲ ದಿನವಾದ ಶನಿವಾರ ಆನ್​ಲೈನ್​ ಹಾಗೂ ಆಫ್‌ಲೈನ್​ ಸೇರಿ 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮಿಷ್ಟದ ಕೋರ್ಸ್‌ಗಳಿಗೆ ದಾಖಲಾತಿ ಮಾಡಿಕೊಂಡರು.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Sep 1, 2024, 6:55 AM IST

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಶನಿವಾರದಿಂದ ಶುರುವಾಗಿದ್ದು, 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಇಚ್ಛೆಯ ಆಯ್ಕೆಯನ್ನು ದಾಖಲಿಸಿಕೊಂಡಿದ್ದಾರೆ.

"ಇದೇ ಮೊದಲ ಬಾರಿಗೆ ಇಂಟರ್‌ನೆಟ್ ಬ್ಯಾಂಕಿಂಗ್, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಿದ್ದು, ಇಡೀ ಪ್ರಕ್ರಿಯೆ ಸರಳವಾಗಿದೆ. ಪೋಷಕರಿಗೂ ಸಂತಸವಾಗಿದೆ. ಚಲನ್ ಡೌನ್‌ಲೋಡ್ ಮಾಡಿಕೊಂಡು ಬ್ಯಾಂಕಿಗೆ ಹೋಗಿ ಶುಲ್ಕ ಪಾವತಿಸುವ ವ್ಯವಸ್ಥೆ ಕೂಡ ಲಭ್ಯವಿದೆ. ಆ ಮೂಲಕವೂ 2 ಸಾವಿರ ಮಂದಿ ರಾತ್ರಿ 8 ಗಂಟೆಯೊಳಗೆ ಶುಲ್ಕ ಪಾವತಿಸಿದ್ದಾರೆ. ಆನ್‌ಲೈನ್ ಮೂಲಕ 1 ಸಾವಿರ ಮಂದಿ ಶುಲ್ಕ ಪಾವತಿಸಿದ್ದಾರೆ" ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದರು.

"ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆದ ಕೆಲವರು ತಮ್ಮ ಶುಲ್ಕ 6.09 ಲಕ್ಷ ರೂ. ಅನ್ನು ಇಂಟರ್‌ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಿದ್ದಾರೆ. ಅಭ್ಯರ್ಥಿಗಳು ಅಥವಾ ಅವರ ಪೋಷಕರು ಬ್ಯಾಂಕ್‌ನಿಂದ ಪಾವತಿ ಮಾಡುವ ಮಿತಿ ಹೆಚ್ಚಿಸಿಕೊಳ್ಳಲು ಅವಕಾಶವಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಗ್ರಾಹಕರಿಗೆ ಒಮ್ಮೆ ಗರಿಷ್ಠ 50 ಲಕ್ಷ ರೂ.ವರೆಗೆ ವರ್ಗಾಯಿಸಲು ಅವಕಾಶ ನೀಡಿದೆ. ಇದೇ ರೀತಿ ಇತರ ಬ್ಯಾಂಕ್‌ಗಳೂ ಪ್ರಯತ್ನ ನಡೆಸುತ್ತಿವೆ. ಇದರಿಂದ ಎನ್‌ಆರ್‌ಐ ಮತ್ತು ಮ್ಯಾನೇಜ್‌ಮೆಂಟ್ ಸೀಟ್‌ಗಳ ಶುಲ್ಕವನ್ನು ಒಮ್ಮೆಗೆ ಪಾವತಿಸಲು ಅನುಕೂಲವಾಗುತ್ತದೆ" ಎಂದು ಹೇಳಿದರು.

"ಹೊಸ ವ್ಯವಸ್ಥೆಯಿಂದಾಗಿ ಬ್ಯಾಂಕ್ ರಜೆ, ಇತ್ಯಾದಿ ಕಾರಣಕ್ಕೆ ಶುಲ್ಕ ಪಾವತಿಸಲು ಸಾಧ್ಯವಾಗಲಿಲ್ಲ ಎಂಬ ದೂರುಗಳು ಕಡಿಮೆಯಾಗಬಹುದು. ಭಾನುವಾರವಾದರೂ ಶುಲ್ಕ ಪಾವತಿಗೆ ಯಾವ ಸಮಸ್ಯೆಯೂ ಇರುವುದಿಲ್ಲ. ಯುಪಿಐ ಪಾವತಿ ವ್ಯವಸ್ಥೆ ಮೂಲಕವೂ ಶುಲ್ಕ ಪಾವತಿ ಮಾಡಬಹುದು. ಒಟ್ಟಾರೆ ಪಾವತಿ ವ್ಯವಸ್ಥೆಯನ್ನು ಜನಸ್ನೇಹಿ ಮಾಡಿರುವ ಕಾರಣಕ್ಕೆ ತಾಂತ್ರಿಕ ಸಮಸ್ಯೆಗಳು ಕಡಿಮೆಯಾಗುವ ವಿಶ್ವಾಸವಿದೆ" ಎಂದರು.

"ಆಪ್ಷನ್​ ಎಂಟ್ರಿಯ ನಂತರ ಶುಲ್ಕ ಪಾವತಿ ಮಾಡಲು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಮ್ಮೆಗೆ ಪ್ರಯತ್ನಿಸಿದ್ದರಿಂದ ಕೆಲವೊಮ್ಮೆ ಸರ್ವರ್ ನಿಧಾನವಾಗಿ ಮತ್ತೊಮ್ಮೆ ಸ್ಥಗಿತಗೊಂಡ ಪ್ರಸಂಗ ನಡೆದಿದೆ. ಕೂಡಲೇ ತಾಂತ್ರಿಕ ಸಿಬ್ಬಂದಿ ಸರಿಮಾಡಿ ಸಹಜ ಸ್ಥಿತಿಗೆ ತಂದಿದ್ದಾರೆ" ಎಂದು ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ - CET OR NEET SEAT ALLOTMENT RESULTS

ETV Bharat Logo

Copyright © 2025 Ushodaya Enterprises Pvt. Ltd., All Rights Reserved.