ಚಿಕ್ಕಮಗಳೂರು: ಮಂಗನ ಕಾಯಿಲೆಗೆ (ಕೆಎಫ್‌ಡಿ ಸೋಂಕು) ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಕೊಟ್ರಮ್ಮ (43) ಎಂದು ಗುರುತಿಸಲಾಗಿದೆ.
ಕೊಪ್ಪ ತಾಲ್ಲೂಕಿನ ನುಗ್ಗಿ ಗ್ರಾ.ಪಂ.ವ್ಯಾಪ್ತಿಯ ದೇವಗನ್ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರಿಗೆ ಮೊದಲು ಜ್ವರ, ಸುಸ್ತು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕಳೆದ ಸೋಮವಾರ ಇವರ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು.
ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಮತ್ತೆ 6 ಮಂದಿಯಲ್ಲಿ ಕೆಎಫ್‌ಡಿ ಸೋಂಕು ಪತ್ತೆಯಾಗಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈ ಕುರಿತು ಕೂಲಿ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಇದನ್ನೂ ಓದಿ: ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ! ತಗ್ಗಲಿದೆ ಕರೆಂಟ್ ಬಿಲ್, ಏಪ್ರಿಲ್ 1ರಿಂದ ಜಾರಿ