ETV Bharat / state

ಫೆ.10 ರೊಳಗೆ ಖಾತಾ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ - CM SIDDARAMAIAH

ಫೆ.10ರೊಳಗೆ ನಿಗದೊತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ಧಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ (ETV Bharat)
author img

By ETV Bharat Karnataka Team

Published : Jan 6, 2025, 10:40 PM IST

ಬೆಂಗಳೂರು: ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.

ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯನಿರ್ವಹಿಸಿ. ನಿಯಮ ಪಾಲಿಸದ ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅತ್ಯಗತ್ಯವಿದೆ. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ ಮಾಡಲಾಗುತ್ತಿದೆ. ಕೆಲವು ಅಧಿಕಾರಿಗಳೂ ಇದರ ಪರವಾಗಿದ್ದಾರೆ. ಇದೆಲ್ಲಕ್ಕೂ ಕಡಿವಾಣ ಅಗತ್ಯ. ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತಿ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌ ಎಂದರು.

ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್‌ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್‌ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದು ಸೂಚಿಸಿದರು.

ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್‌ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್‌ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು ಎಂದು ಸೂಚಿಸಿದರು.

ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್‌ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ‌ ಕೈಗೊಳ್ಳಬೇಕು. ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು. ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ - ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದರು.

ಈ ವರ್ಷ ಡಿಸೆಂಬರ್‌ ಕೊನೆಗೆ 16,993 ಕೋಟಿ ರೂ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ವಹಿಸಲು ಸೂಚಿಸಿದರು.

ಇದನ್ನೂ ಓದಿ: ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಗೆ ಸಿಎಂ ಚಾಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.