ಬೆಂಗಳೂರು: ಮೊದಲ ಬಾರಿಗೆ ನಂದಿನಿ ಬ್ರ್ಯಾಂಡ್ 'ರೆಡಿ ಟು ಕುಕ್' ನಂದಿನಿ ವೇ ಪ್ರೋಟೀನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಕೆಎಂಎಫ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನಂದಿನಿ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಕೆಎಂಎಫ್ ಬಿಡುಗಡೆ ಮಾಡಿರುವ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇಕಡಾ 5ರಷ್ಟು ಪ್ರೋಟೀನ್ ಅಂಶವನ್ನು ಮಿಶ್ರ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಎರಡು ವಿಧದ ಪ್ಯಾಕೆಟ್ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. 450 ಗ್ರಾಂ. ತೂಕದ ಪ್ಯಾಕೆಟ್‌ಗೆ 40 ರೂ. ಹಾಗೂ 900 ಗ್ರಾಂ. ತೂಕದ ಪ್ಯಾಕೆಟ್‌ಗೆ 80 ರೂ. ಗರಿಷ್ಠ ಮಾರಾಟ ದರ ನಿಗದಿಪಡಿಸಲಾಗಿದೆ.
ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಲ್ಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ… pic.twitter.com/aG6IkAiUjR
— CM of Karnataka (@CMofKarnataka) December 25, 2024
ಸಿಎಂ ಸಿದ್ದರಾಮಯ್ಯ ಶ್ಲಾಘನೆ: ''ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಲ್ಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದ ಸಿದ್ಧಪಡಿಸಲಾಗುತ್ತಿದೆ. ಹೀಗೆ ನಂದಿನಿಯ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್ ಹೆಮ್ಮರವಾಗಿ ಬೆಳೆಯುತ್ತಿದೆ'' ಎಂದು ಮುಖ್ಯಮಂತ್ರಿಗಳು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ್ಯ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಮತ್ತು ಮಾನ್ಯ ಸಚಿವರಾದ ಶ್ರೀ @dineshgrao, @krishnabgowda , ಶ್ರೀ ವೆಂಕಟೇಶ್ ಅವರು ನಂದಿನಿ ಬ್ರ್ಯಾಂಡ್ನ 'ರೆಡಿ ಟು ಕುಕ್' ನಂದಿನಿ ವೇ ಪ್ರೋಟೀನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು. pic.twitter.com/UPnbyqMVIH
— Bheema Naik (@BheemaNaikINC) December 25, 2024
''ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ಬೆಳಗ್ಗಿನ ಉಪಾಹಾರ ಗರಿಗರಿ ದೋಸೆ, ಸವಿಸವಿ ಇಡ್ಲಿಯೊಂದಿಗೆ ರುಚಿ ಮತ್ತು ಆರೋಗ್ಯವನ್ನು ವೃದ್ಧಿಗೊಳಿಸಲಿದೆ'' ಎಂದು ಸಿಎಂ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಸಂದರ್ಭದಲ್ಲಿ ಸಚಿವರಾದ ವೆಂಕಟೇಶ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: 23 ವರ್ಷಗಳ ನಂತರ ತನ್ನ ಕುಟುಂಬ ಸೇರಿದ ಸಾಕಮ್ಮ! ಇದಕ್ಕೆ ಕಾರಣ ಸಾಮಾಜಿಕ ಜಾಲತಾಣ