ETV Bharat / state

ಸಂಕ್ರಾಂತಿ ನಂತರ ನಂದಿನಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಸುಳಿವು ನೀಡಿದ ಕೆಎಂಎಫ್ ಅಧ್ಯಕ್ಷರು - KMF MILK RATE

ಪ್ರತಿ ಲೀಟರ್‌ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಬಂದಿದೆ ಎಂದು ಕೆಎಂಎಫ್​ನ ಅಧ್ಯಕ್ಷ, ಮಾಜಿ ಶಾಸಕ ಭೀಮಾನಾಯಕ್ ಹೇಳಿದ್ದಾರೆ.

KMF President Bheema Naik
ಕೆಎಂಎಫ್​ನ ಅಧ್ಯಕ್ಷ ಭೀಮಾನಾಯಕ್ (ETV Bharat)
author img

By ETV Bharat Karnataka Team

Published : 14 hours ago

Updated : 13 hours ago

ಬೆಂಗಳೂರು : ಸಂಕ್ರಾಂತಿ ಹಬ್ಬದ ನಂತರ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಇಂದು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಕೆಎಂಎಫ್​ನ ಅಧ್ಯಕ್ಷ, ಮಾಜಿ ಶಾಸಕ ಭೀಮಾನಾಯಕ್, ಪ್ರತಿ ಲೀಟರ್‌ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಬಂದಿದೆ. ಹಾಗಾಗಿ, ಸಂಕ್ರಾಂತಿ ಹಬ್ಬದ ಬಳಿಕ ಈ ಸಂಬಂಧ ಸಭೆ ನಡೆಸಿ ದರ ಏರಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಹಾಲಿನ ದರ ಏರಿಕೆಗೆ ಬೇಡಿಕೆ ಬಂದಿದ್ದು, ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ. ಅಂತಿಮವಾಗಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಕೆಎಂಎಫ್​ನ ಅಧ್ಯಕ್ಷ, ಮಾಜಿ ಶಾಸಕ ಭೀಮಾನಾಯಕ್ ಮಾತನಾಡಿದರು (ETV Bharat)

ಹಾಲಿನ ದರ ಹೆಚ್ಚಳ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಆದರೆ ಇನ್ನೂ ದರ ಏರಿಕೆ ಬಗ್ಗೆ ನಿರ್ಧಾರವಾಗಿಲ್ಲ. ಸಂಕ್ರಾಂತಿ ಹಬ್ಬದ ನಂತರ ಮತ್ತೊಮ್ಮೆ ಸಭೆ ಸೇರಿ ನಿರ್ಧರಿಸಲಾಗುವುದು.‌ ಈ ಹಿಂದೆ 50 ಎಂಎಲ್‌ ಹಾಲನ್ನು ನೀಡುವ ಮೂಲಕ ಲೀಟರ್‌ಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಹೆಚ್ಚುವರಿ ಹಾಲನ್ನು ವಾಪಸ್‌‍ ಪಡೆಯಲು ಉದ್ದೇಶಿಸಲಾಗಿದೆ. ಹಾಲಿನ ದರ ಹೆಚ್ಚಳ ಕುರಿತಂತೆ ಹಾಲು ಒಕ್ಕೂಟದ ಸಭೆಯಲ್ಲಿ ಚರ್ಚೆಯಾಗಿದ್ದು, ಹೆಚ್ಚಳ ಮಾಡುವಂತೆ ಪ್ರಸ್ತಾಪವೂ ಆಗಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ನಂದಿನಿ ತುಪ್ಪ ಕಳೆದ ಹತ್ತು ವರ್ಷಗಳಿಂದ ಬಳಕೆಯಾಗುತ್ತಿದೆ. ತಿರುಪತಿ ಲಡ್ಡು ವಿವಾದದ ನಂತರ ನಂದಿನಿ ತುಪ್ಪ ಶೇ.10 ರಿಂದ 15ರಷ್ಟು ಮಾರಾಟ ಹೆಚ್ಚಳವಾಗಿದೆ. ಶಿರಡಿಯಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಶಿರಡಿಗೂ ತುಪ್ಪ ಸರಬರಾಜು ಮಾಡುವ ವ್ಯವಸ್ಥೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ನಂದಿನಿ ಇಡ್ಲಿ-ದೋಸೆ ಹಿಟ್ಟು ನಿನ್ನೆ ಬಿಡುಗಡೆಯಾಗಿದ್ದು, ಇಂದಿನಿಂದಲೇ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತದೆ. ಪ್ರಸ್ತುತ ಇಡ್ಲಿ, ದೋಸೆ ಹಿಟ್ಟಿನ ಮಾರುಕಟ್ಟೆಯಲ್ಲಿ ಶೇ.15ರಿಂದ 20ರಷ್ಟು ನಾವು ಪಾಲು ಪಡೆಯಬೇಕೆಂಬ ಉದ್ದೇಶ ಹೊಂದಿದ್ದೇವೆ. ಬೇರೆ ಕಂಪನಿಯವರು ಪ್ರತಿದಿನ ಮೂರು ಸಾವಿರ ಮೆಟ್ರಿಕ್‌ ಟನ್‌ನಷ್ಟು ಮಾರಾಟ ಮಾಡುತ್ತಿದ್ದು, ನಾವು 5 ಸಾವಿರ ಮೆಟ್ರಿಕ್‌ ಟನ್‌ ಮಾರಾಟ ಮಾಡುವ ಗುರಿ ಹೊಂದಿದ್ದೇವೆ. 450 ಗ್ರಾಂ ದೋಸೆ ಹಿಟ್ಟಿಗೆ 40 ರೂ, 900 ಗ್ರಾಂ ದೋಸೆ ಹಿಟ್ಟಿಗೆ 80 ರೂ. ನಿಗದಿಪಡಿಸಲಾಗಿದ್ದು, ಶೇ.5ರಷ್ಟು ಪ್ರೋಟೀನ್‌ ಸೇರಿಸಲಾಗಿದೆ. ಇದರಿಂದ ಮಕ್ಕಳು, ಕ್ರೀಡಾಪಟುಗಳು ಸೇರಿದಂತೆ ಎಲ್ಲ ವಯಸ್ಸಿನವರಿಗೂ ಸಹಾಯಕವಾಗಲಿದೆ ಎಂದರು.

ಬೆಂಗಳೂರು ನಂತರ ಇತರ ಜಿಲ್ಲೆಗಳಲ್ಲೂ ಯಾವ ರೀತಿ ಬೇಡಿಕೆ ಬರಲಿದೆ ಎಂಬುದನ್ನು ಆಧರಿಸಿ ಎಲ್ಲಾ ಕಡೆ ಮಾರಾಟ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕೆಎಂಎಫ್‌ನ ಬಜೆಟ್‌ಗೆ ಆರ್‌ಸಿಬಿಯವರು ಒಪ್ಪಿಕೊಂಡರೆ ಮುಂದಿನ ಐಪಿಎಲ್‌ನಲ್ಲಿ ಪ್ರಾಯೋಜಕತ್ವ ಮಾಡಲಾಗುವುದು. ಈ ಸಂಬಂಧ ಆರ್‌ಸಿಬಿ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಲಾಗುವುದು ಎಂದರು.

ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕರ ವರ್ಗಾವಣೆ ಬಗ್ಗೆ ಕೇಳಿದಾಗ, ಇದಕ್ಕೆ ಪ್ರತಿಕ್ರಿಯೆ ನೀಡಲು ಭೀಮಾನಾಯಕ್ ನಿರಾಕರಿಸಿದರು.

ಇದನ್ನೂ ಓದಿ : ನಂದಿನಿ 'ರೆಡಿ ಟು ಕುಕ್' ವೇ ಪ್ರೋಟೀನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆಗೊಳಿಸಿದ ಕೆಎಂಎಫ್ - READY TO COOK IDLI DOSA BATTER

Last Updated : 13 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.