ETV Bharat / state

ಕೋಲಾರ: ಕಾಂಗ್ರೆಸ್‌ನಿಂದ ಕೆ.ವಿ.ಗೌತಮ್​, ಎನ್​ಡಿಎಯಿಂದ ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ - Kolar

ಚಿನ್ನದ ನಾಡು ಕೋಲಾರದಲ್ಲಿ ಇಂದು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

nomination paper Submission
ಕಾಂಗ್ರೆಸ್ ಅಭ್ಯರ್ಥಿ ಕೆ ವಿ ಗೌತಮ್​, ಎನ್​ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ
author img

By ETV Bharat Karnataka Team

Published : Apr 4, 2024, 6:04 PM IST

Updated : Apr 4, 2024, 10:52 PM IST

ಕೋಲಾರದಲ್ಲಿ ನಾಮಪತ್ರ ಸಲ್ಲಿಕೆ

ಕೋಲಾರ: ಲೋಕಸಭೆ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಅವರು ನೂರಾರು ಬೆಂಬಲಿಗರು ಹಾಗು ಮುಖಂಡರೊಂದಿಗೆ ಆಗಮಿಸಿ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಕೋಲಾರ ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೋಲಾರ ನಗರದಲ್ಲಿ ರೋಡ್ ಶೋ ನಡೆಸಿ ಒಗ್ಗಟ್ಟು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಕೆ.ವಿ.ಗೌತಮ್ ಮಾತನಾಡಿ, "ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ನಾವೆಲ್ಲಾ ಒಂದಾಗಿದ್ದೇವೆ. ಕಳೆದ ಐದು ದಿನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಎಲ್ಲರ ಒಮ್ಮತದಿಂದ ನಾಮಪತ್ರ ಸಲ್ಲಿಸಿದ್ದೇವೆ. ಗೆಲ್ಲುವ ವಿಶ್ವಾಸವಿದೆ" ಎಂದರು.

ಇನ್ನು, ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಅವರು ಬೃಹತ್ ಶಕ್ತಿ ಪ್ರದರ್ಶನ ಮಾಡಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು.

ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಜೆಡಿಎಸ್, ಬಿಜೆಪಿ ಪಕ್ಷಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಈಗಾಗಲೇ ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದು, ಇಂದು ಪಕ್ಷದ ನಾಯಕರೊಂದಿಗೆ ಎರಡನೇ ಬಾರಿ ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಮಾತನಾಡಿ, "ಸದೃಢ ಭಾರತ ಕಟ್ಟಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪ್ರಧಾನಿಯನ್ನು ದೇಶ ಮಾತ್ರವಲ್ಲದೇ ವಿಶ್ವದ ಎಲ್ಲಾ ನಾಯಕರು ಗೌರವದಿಂದ ಕಾಣುತ್ತಿದ್ದಾರೆ. ಆದರೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕುರಿತು ಏಕವಚನದಲ್ಲಿ ಮಾತನಾಡುತ್ತಾರೆ" ಎಂದು ದೂರಿದರು.

ಮೆರವಣಿಗೆಯಲ್ಲಿ ಸಂಸದ ಮುನಿಸ್ವಾಮಿ, ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಸಮೃದ್ದಿ ಮಂಜುನಾಥ್, ಎಂ.ರವಿಕುಮಾರ್, ಮಾಜಿ ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ, ವರ್ತೂರು ಆರ್.ಪ್ರಕಾಶ್, ಮಂಜುನಾಥ ಗೌಡ ಇದ್ದರು.

ಇದನ್ನೂಓದಿ: ಕೋಟೆನಾಡಲ್ಲಿ ಶಕ್ತಿ ಪ್ರದರ್ಶನ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - Chitradurga Lok Sabha constituency

Last Updated : Apr 4, 2024, 10:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.