ETV Bharat / state

ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ - Ronald Sequeira - RONALD SEQUEIRA

ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ಇಂದು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.

ronald-sequeira
ರೊನಾಲ್ಡ್ ಸಿಕ್ವೇರಾ (etv bharat)
author img

By ETV Bharat Karnataka Team

Published : May 6, 2024, 8:03 PM IST

ಮಂಗಳೂರು : ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಸೋಮವಾರದಂದು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 69 ವರ್ಷ ವಯಸ್ಸಾಗಿತ್ತು. ಸಣ್ಣ ಕತೆ ಮತ್ತು ಲಲಿತ ಪ್ರಬಂಧ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ’ಶಿಕೇರಾಮ್ ಸುರತ್ಕಲ್’ ಕಾವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು.

ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ. ಟಿ.ಎಮ್.ಎ ಫೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು. ವೃತ್ತಿಯಲ್ಲಿ ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ. ಎ ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿ ಸೊಜಾ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶೂ, ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್, ಕಟೀಲ್, ಕವಿ ಚಿಂತಕ್ ಟೈಟಸ್ ನೊರೊನ್ಹಾ, ಪತ್ರಕರ್ತ ಹೆಚ್. ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ - Gurulinga Kapase

ETV Bharat Logo

Copyright © 2025 Ushodaya Enterprises Pvt. Ltd., All Rights Reserved.