ETV Bharat / state

ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಶೇ.70ರಷ್ಟು ತಕರಾರು ಅರ್ಜಿಗಳ ವಿಲೇವಾರಿ: ಸಚಿವ ಕೃಷ್ಣಬೈರೇಗೌಡ - PENDING CASE IN AC COURT

ಎ.ಸಿ ಕಂದಾಯ ನ್ಯಾಯಾಲಯದಲ್ಲಿ ಬಾಕಿ ಇದ್ದ ತಕರಾರು ಅರ್ಜಿಗಳ ಪೈಕಿ ಶೇ.70ರಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

Krishnabairegowda meeting
ಸಚಿವ ಕೃಷ್ಣಬೈರೇಗೌಡರಿಂದ ಮಾಸಿಕ ಸಭೆ (ETV Bharat)
author img

By ETV Bharat Karnataka Team

Published : Nov 16, 2024, 6:48 PM IST

ಬೆಂಗಳೂರು: ಉಪ ವಿಭಾಗಾಧಿಕಾರಿ (ಎ.ಸಿ) ಕಂದಾಯ ನ್ಯಾಯಾಲಯದಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.70ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಿ ಮಾತನಾಡಿದ ಅವರು, ''ಎಸಿ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ನಿಗದಿಪಡಿಸಿರುವ ಕಾಲಮಿತಿ 6 ತಿಂಗಳು ಮಾತ್ರ. ಆದರೆ ಕಳೆದ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕಂದಾಯ ನ್ಯಾಯಾಲಯಗಳ ಪ್ರಕರಣಗ ವಿಳಂಬದ ಬಗ್ಗೆ ತಲೆಯನ್ನೇ ಕೆಡಿಸಿಕೊಂಡಿರಲಿಲ್ಲ. ಪರಿಣಾಮ ರೈತರು ತೀವ್ರ ತೊಂದರೆ ಒಳಗಾಗಬೇಕಾದ ಸ್ಥಿತಿ ಎದುರಾಗಿತ್ತು'' ಎಂದು ವಿಷಾದಿಸಿದರು.

ಅಭಿಯಾನ ಮಾದರಿಯಲ್ಲಿ ವಿಲೇವಾರಿ: ''ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಎಸಿ ನ್ಯಾಯಾಲಯದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಯ 59,339 ಪ್ರಕರಣಗಳು ವಿಲೇ ಆಗದೆ ಬಾಕಿ ಉಳಿದಿದ್ದವು. ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಲೇ ಈ ರೀತಿಯಾಗಿ ಮಿತಿಮೀರಿ ವಿಳಂಭವಾಗುವುದರಿಂದ ಸಾಮಾನ್ಯ ಜನರಿಗೆ ತೀವ್ರ ತೊಂದರೆಯಾಗುತ್ತಿರುವುದನ್ನು ಗಮನಿಸಿದ ನಮ್ಮ ಸರ್ಕಾರ ಇದಕ್ಕೊಂದು ಪರಿಹಾರ ನೀಡಲು ತೀರ್ಮಾನಿಸಿತ್ತು. ಬಾಕಿ ಪ್ರಕರಣಗಳನ್ನು ವಿಲೇ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಕಳೆದ ಒಂದು ವರ್ಷದಲ್ಲಿ ಬಾಕಿ ಪ್ರಕರಣಗಳ ವಿಲೇವಾರಿಯನ್ನು ಅಭಿಯಾನ ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ'' ಎಂದರು.

Krishnabairegowda meeting
ಸಚಿವ ಕೃಷ್ಣಬೈರೇಗೌಡರಿಂದ ಮಾಸಿಕ ಸಭೆ (ETV Bharat)

''ಎಸಿ ನ್ಯಾಯಾಲಯಗಳಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಅವಧಿಗೆ ಬಾಕಿ ಇದ್ದ 59,339 ಪ್ರಕರಣಗಳ ಪೈಕಿ ಕಳೆದ ಒಂದು ವರ್ಷದಲ್ಲಿ 44,545 ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಹಾಲಿ ಬಾಕಿಯನ್ನು 14,794 ಕ್ಕೆ ಇಳಿಸಲಾಗಿದ್ದು, ಶೇ.70ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದೆ'' ಎಂದು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು.

ಹಿಂದಿನ ಸರ್ಕಾರದ ಆಡಳಿತ ಯಂತ್ರ ವೈಫಲ್ಯ: "1ರಿಂದ 5 ವರ್ಷಗಳ ಅವಧಿಯಲ್ಲಿ ಬಾಕಿ ಉಳಿದಿದ್ದ 26,551 ಪ್ರಕರಣಗಳ ಪೈಕಿ 10,504 ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಇನ್ನೂ 5 ವರ್ಷಕ್ಕೂ ಮೇಲ್ಪಟ್ಟ 32,787 ಪ್ರಕರಣಗಳನ್ನು ಈ ಹಿಂದಿನ ಸರ್ಕಾರ ಬಾಕಿ ಉಳಿಸಿಹೋಗಿತ್ತು. ಇದು ಆಡಳಿತ ಯಂತ್ರ ವೈಫಲ್ಯವಲ್ಲದೆ ಮತ್ತೇನು ಅಲ್ಲ. ಆದರೆ, ಈ ಪ್ರಕರಣಗಳನ್ನೂ ಕಳೆದ ಇಂದು ವರ್ಷದ ಅವಧಿಯಲ್ಲಿ 28,497 ಪ್ರಕರಣಗಳಿಗೆ ಮುಕ್ತಿ ನೀಡಲಾಗಿದೆ. ಕೇವಲ 4290 ಪ್ರಕರಣಗಳನ್ನು ಮಾತ್ರ ಉಳಿಸಲಾಗಿದೆ'' ಎಂದು ಪ್ರಶಂಸಿಸಿದರು.

''ಎಸಿ ಕಂದಾಯ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಇತ್ಯರ್ಥಕ್ಕಾಗಿಯೇ ಸರ್ಕಾರ 18 ಜನ ವಿಶೇಷ ಉಪ ವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಕರಾರು ಅರ್ಜಿಗಳ ವಿಲೇವಾರಿಯನ್ನು ಎಲ್ಲಾ ಅಧಿಕಾರಿಗಳೂ ಇದೇ ವೇಗದಲ್ಲಿ ಮುಂದುವರೆಸಿದರೆ ಮುಂದಿನ ಜನವರಿ ಅಥವಾ ಫೆಬ್ರವರಿಯೊಳಗಾಗಿ ಎಲ್ಲಾ ಬಾಕಿ ಪ್ರಕರಣಗಳೂ ಇತ್ಯರ್ಥವಾಗಲಿದೆ. ಅಲ್ಲದೇ, ಉಪ ವಿಭಾಗಾಧಿಕಾರಿಗಳು ವಾರಕ್ಕೆ ನಾಲ್ಕು ಮತ್ತು ವಿಶೇಷ ಉಪ ವಿಭಾಗಾಧಿಕಾರಿಗಳು ಎರಡು ಪ್ರಕರಣವನ್ನು ವಿಲೇಗೊಳಿಸಬೇಕು'' ಎಂದು ಅವರು ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಕಂದಾಯ ಆಯುಕ್ತ ಸುನೀಲ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮುಡಾ ನಿವೇಶನದಲ್ಲಿ ತಪ್ಪಾಗಿದ್ದರೆ, ನನ್ನ ಸಂಬಂಧಿಯಾದರೂ ಶಿಕ್ಷೆ ಅನುಭವಿಸಲೇಬೇಕು : ಶಾಸಕ ಜಿ ಟಿ ದೇವೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.