ETV Bharat / state

ಕೋಚಿಂಗ್ ಸಹಾಯವಿಲ್ಲದೆ ಸ್ವಂತ ಪರಿಶ್ರಮದಿಂದ UPSC ಪರೀಕ್ಷೆ ಪಾಸ್; ಹುಬ್ಬಳ್ಳಿಯ ಕೃಪಾ ಜೈನ್‌ಗೆ 440ನೇ ರ್‍ಯಾಂಕ್ - Krupa Jain - KRUPA JAIN

ಕೇಂದ್ರ ಲೋಕಸೇವಾ ಆಯೋಗದ 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಹುಬ್ಬಳ್ಳಿಯ ಕೃಪಾ ಎ.ಜೈನ್‌ 440ನೇ ರ್‍ಯಾಂಕ್ ಪಡೆದಿದ್ದಾರೆ.

krupa-jain-from-hubli-get-440th-rank-in-upsc
ಯುಪಿಎಸ್​ಸಿ ಫಲಿತಾಂಶ: ಹುಬ್ಬಳ್ಳಿಯ ಕೃಪಾ ಜೈನ್ 440ನೇ ರ್‍ಯಾಂಕ್
author img

By ETV Bharat Karnataka Team

Published : Apr 16, 2024, 6:45 PM IST

Updated : Apr 16, 2024, 8:12 PM IST

ಹುಬ್ಬಳ್ಳಿಯ ಕೃಪಾ ಜೈನ್‌ಗೆ 440ನೇ ರ್‍ಯಾಂಕ್

ಹುಬ್ಬಳ್ಳಿ: ಯಾವುದೇ ಕೋಚಿಂಗ್ ಸಹಾಯವಿಲ್ಲದೇ ಸ್ವಂತ ಪರಿಶ್ರಮದಿಂದ ಹುಬ್ಬಳ್ಳಿಯ ಯುವತಿಯೊಬ್ಬರು ವಿಶ್ವದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿರುವ ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇಂದು ಪ್ರಕಟವಾದ ಯುಪಿಎಸ್​ಸಿ 2023ರ ಪರೀಕ್ಷಾ ಫಲಿತಾಂಶದಲ್ಲಿ ಹುಬ್ಬಳ್ಳಿಯ ಅಭಯ ಜೈನ್ ಹಾಗೂ ಇಂದಿರಾ ಜೈನ್ ಅವರ ಪುತ್ರಿ ಕೃಪಾ ಎ.ಜೈನ್‌ 440ನೇ ರ್‍ಯಾಂಕ್ ಪಡೆದಿದ್ದಾರೆ.

ಕಿರಾಣಿ ವರ್ತಕರ ಮಗಳಾದ ಕೃಪಾ ಜೈನ್ ಬೆಂಗಳೂರಿನ ಆರ್.ವಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದಿ, ಬಳಿಕ ಬೆಂಗಳೂರಿನ ಸಿಸ್ಕೋ ಕಂಪನಿಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು. 2020ರಲ್ಲಿ ಯುಪಿಎಸ್​ಸಿ ಪರೀಕ್ಷೆಗೆ ಸಿದ್ಧತೆಗಾಗಿ ದೆಹಲಿಗೆ ತೆರಳಿ ಯಾವುದೇ ಕೋಚಿಂಗ್ ಪಡೆಯದೆ ಸ್ವಂತ ಪರಿಶ್ರಮ, ನಿರಂತರ ಪ್ರಯತ್ನದ ಮೂಲಕ ಈ ಸಾಧನೆ ಮಾಡಿದ್ದಾರೆ.

ಈ ಹಿಂದೆಯೂ ಯುಪಿಎಸ್​ಸಿಯಲ್ಲಿ ಉತ್ತೀರ್ಣರಾಗಿ ಭಾರತೀಯ ರೈಲ್ವೆ ಸೇವೆಗೆ ಆಯ್ಕೆಯಾಗಿದ್ದರು. ಹೆಚ್ಚಿನ ರ್‍ಯಾಂಕ್ ಪಡೆಯುವ ಉದ್ದೇಶದಿಂದ ಮತ್ತೊಮ್ಮೆ ನಾಗರಿಕ ಸೇವಾ ಪರೀಕ್ಷೆ ಎದುರಿಸಿದ್ದರು. ಮಗಳ ಸಾಧನೆಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿಎಸ್​ಸಿ 2023ರ ಪರೀಕ್ಷಾ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ಟಾಪರ್​ - UPSC Results

Last Updated : Apr 16, 2024, 8:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.