ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್-2023 (kSET-23) ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲಾ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಮೇ 10ರೊಳಗೆ ಇ-ಮೇಲ್ (keakset2023@gmail.com) ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಜನವರಿ 13 ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ, ಏಪ್ರಿಲ್ 4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ: ಯುಜಿಸಿಇಟಿ-24 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಮೇ 7ರವರೆಗೆ ಕಾಲಾವಕಾಶ - UGCET Answer Key