ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ (Fits) ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ, ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ಹನೂರು ತಾಲೂಕಿನ ಪುದುರಾಮಪುರದಲ್ಲಿ ನಡೆಯಿತು.
ಕೊಳ್ಳೇಗಾಲದಿಂದ ಬಸ್ ಹೊರಟಿತ್ತು. ಪುದುರಾಮಪುರ ಸಮೀಪ ಚಾಲಕ ಸುಭಾಷ್ಗೆ ಚಾಲನೆ ಮಾಡುತ್ತಿದ್ದಾಗಲೇ ದಿಢೀರ್ ಫಿಟ್ಸ್ ಕಾಣಿಸಿಕೊಂಡು ಕೆಳಗೆ ಬಿದ್ದಿದ್ದಾರೆ. ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದೆ.
ಆದರೆ, ಆ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿದ್ದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ. ಬಸ್‌ನಲ್ಲಿ ನಿರ್ವಾಹಕ ಮತ್ತು ಓರ್ವ ಪ್ರಯಾಣಿಕ ಮಾತ್ರ ಇದ್ದುದರಿಂದ ಹೆಚ್ಚಿನ ತೊಂದರೆಯಾಗಿಲ್ಲ.
ಚಾಲಕ ಸುಭಾಷ್ ಕಳೆದ 12 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಮೂರ್ಛೆರೋಗ ಇರುವುದರಿಂದ ಅವರಿಗೆ ಬೇರೆ ಜವಾಬ್ದಾರಿ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇದೀಗ ಚಾಲಕ ಸುಭಾಷ್ ಚಾಮರಾಜನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು; ಕೆಎಸ್ಆರ್ಟಿಸಿ ಬಸ್ - ಟೋಯಿಂಗ್ ವಾಹನದ ನಡುವೆ ಅಪಘಾತ - KSRTC and towing vehicle accident