ETV Bharat / state

ಆಯತಪ್ಪಿ ಬಿದ್ದು ಕೆಎಸ್ಆರ್​ಟಿಸಿ ಕಂಡಕ್ಟರ್ ಸಾವು - Nanjangudu Traffic Police Station

ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ಕೆಎಸ್​ಆರ್​ಟಿಸಿ ಬಸ್​ನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

KSRTC Conductor
ಕೆಎಸ್ಆರ್​ಟಿಸಿ ಕಂಡಕ್ಟರ್
author img

By ETV Bharat Karnataka Team

Published : Mar 8, 2024, 6:45 PM IST

ಮೈಸೂರು: ಕೆಎಸ್​ಆರ್​ಟಿಸಿ ಬಸ್​ನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಮಹದೇವಸ್ವಾಮಿ (35) ಮೃತ ದುರ್ದೈವಿಯಾಗಿದ್ದಾರೆ. ಮೃತರು ಚಾಮರಾಜನಗರ ತಾಲೂಕಿನ ಹರವೆ ಹೋಬಳಿಯ ಹಳೇಪುರ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ.

ಇಂದು ಶುಕ್ರವಾರ ಬೆಳಗ್ಗೆ 10 ಗಂಟೆಯ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಂಜನಗೂಡು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಲ್ಲನಮೂಲೆ ಮಠದ ಬಳಿ ಬಸ್ ವೇಗವಾಗಿ ಸಂಚರಿಸಿದೆ. ಬಾಗಿಲ ಬಳಿ ನಿಂತಿದ್ದ ಕಂಡಕ್ಟರ್ ಮಹದೇವಸ್ವಾಮಿ ಆಯತಪ್ಪಿ ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು, ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಂಗಳೂರು: ಸಂಚರಿಸುತ್ತಿದ್ದ ಬಸ್​ನಿಂದ ಹೊರಗೆ ಬಿದ್ದು ಕಂಡಕ್ಟರ್ ಸಾವು​- ಘಟನೆಯ ವಿಡಿಯೋ ವೈರಲ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.