ಬೆಂಗಳೂರು: ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಕೆಎಸ್‌ಆರ್‌ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ) ಮುಂದಾಗಿದೆ.
![KSRTC is going to increase the bus ticket price](https://etvbharatimages.akamaized.net/etvbharat/prod-images/29-07-2024/kn-bng-03-ksrtc-planning-to-increase-bus-fair-7210969_29072024190052_2907f_1722259852_510.jpg)
ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಿಲ್ಲ. ಈಗ ಟಿಕೆಟ್ ದರ ಹೆಚ್ಚಳ ಮಾಡದಿದ್ದರೆ ನಿಗಮಕ್ಕೆ ದೊಡ್ಡ ಹೊರೆ ಬೀಳಬಹುದು. ಹೀಗಾಗಿ, ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
![KSRTC is going to increase the bus ticket price](https://etvbharatimages.akamaized.net/etvbharat/prod-images/29-07-2024/kn-bng-03-ksrtc-planning-to-increase-bus-fair-7210969_29072024190052_2907f_1722259852_620.jpg)
ನೌಕರರಿಗೆ ಸಂಬಳ ಹೆಚ್ಚಳ ಮತ್ತು ಇತರೆ ಸವಲತ್ತುಗಳನ್ನು ಕೊಡಬೇಕಾದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. 2020ರಲ್ಲಿಯೇ ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ ಮಾಡಬೇಕಿತ್ತು. ಆದರೆ, ಬಸ್ ಟಿಕೆಟ್ ದರ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆ ಉಂಟಾಗಬಾರದೆಂಬ ದೃಷ್ಟಿಯಿಂದ ಇಲ್ಲಿಯವರೆಗೂ ನೌಕರರ ವೇತನ ಪರಿಷ್ಕರಣೆ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡಬೇಕಿದೆ. ಹಾಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಹಾಲು, ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ಕೂಡ ವ್ಯಕ್ತವಾಗಿದ್ದವು.
ಇದನ್ನೂ ಓದಿ: ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ: ಸಚಿವ ರಾಮಲಿಂಗಾ ರೆಡ್ಡಿ - BUS TICKET FARE
ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇತ್ತೀಚಿಗೆ ಹೇಳಿಕೆ ನೀಡಿದ್ದರು. ವಿಧಾನಸೌಧದಲ್ಲಿ ಮಾತನಾಡಿದ್ದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರೋದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದರು.