ETV Bharat / state

ಗೌರಿ - ಗಣೇಶ ಹಬ್ಬದ ಪ್ರಯುಕ್ತ 1500 ಹೆಚ್ಚುವರಿ ವಿಶೇಷ ಬಸ್: ಟಿಕೆಟ್ ಬುಕ್ಕಿಂಗ್​ನಲ್ಲಿ ಶೇ.10 ರವರೆಗೆ ರಿಯಾಯಿತಿ - KSRTC Special Bus

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹೆಚ್ಚುವರಿ 1500 ಬಸ್​ಗಳನ್ನು ಕಲ್ಪಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ETV Bharat)
author img

By ETV Bharat Karnataka Team

Published : Sep 2, 2024, 8:54 PM IST

ಬೆಂಗಳೂರು: ಗೌರಿ - ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಮತ್ತು ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 1500 ಹೆಚ್ಚುವರಿ ವಿಶೇಷ ಬಸ್​ ವ್ಯವಸ್ಥೆ ಕಲ್ಪಿಸಿದೆ.

ಸೆಪ್ಟೆಂಬರ್​ 06 ರಂದು ಸ್ವರ್ಣಗೌರಿ ವ್ರತ, ಸೆಪ್ಟಂಬರ್ 07 ರಂದು ಗಣೇಶ ಚತುರ್ಥಿ ಹಾಗೂ 08 ರಂದು ವಾರಾಂತ್ಯದ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟಂಬರ್ 05 ರಿಂದ 07 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್​ 08 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​​ಟಿಸಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿದ್ದು, ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಯಿಕ್ಕೋಡ್​, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಿದ್ದು,ಇ - ಟಿಕೆಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಇದನ್ನೂ ಓದಿ: ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪ : ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರನ್ನ ನೇಮಿಸಿದ ರಾಜ್ಯ ಸರ್ಕಾರ - special hospitality to Darshan

ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಗ್ರಾಮಸ್ಥರಿಗೆ ಬೋರ್​ವೆಲ್ ಗಿಫ್ಟ್ ಕೊಟ್ಟ ಅಭಿಮಾನಿ! - Sudeep Birthday Special

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 220 ಬಸ್: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 220 ಹೆಚ್ಚುವರಿ ವಿಶೇಷ ಬಸ್ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಬೆಂಗಳೂರಿನಿಂದ ರಾಜ್ಯ, ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಸೆಪ್ಟೆಂಬರ್ 5 ರಂದು ಸಂಜೆ ಹಾಗೂ ಸೆ.6 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ಸೆಪ್ಟೆಂಬರ್ 8 ಹಾಗೂ 9 ರಂದು, ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್​ಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.