ETV Bharat / state

₹ 146 ಕೋಟಿ ಆದಾಯ ಗಳಿಸಿ ಮತ್ತೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ರಾಜ್ಯದಲ್ಲಿ ನಂಬರ್ 1 - Kukke Subramanya Temple

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಈ ಬಾರಿಯೂ 146 ಕೋಟಿ ರೂ. ಆದಾಯ ಗಳಿಸುವ ಮೂಲಕ ರಾಜ್ಯದ ದೇವಾಲಯಗಳಲ್ಲಿಯೇ ಮೊದಲ ಸ್ಥಾನ ಪಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
author img

By ETV Bharat Karnataka Team

Published : Apr 8, 2024, 12:28 PM IST

ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಸುಬ್ರಹ್ಮಣ್ಯದ ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂಪಾಯಿ ಆದಾಯ ಗಳಿಸಿದೆ. 2023 ಏಪ್ರಿಲ್​ನಿಂದ 2024 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಈ ಮೂಲಕ ಸತತ 13ನೇ ವರ್ಷವೂ ಆದಾಯದಲ್ಲಿ ರಾಜ್ಯದ ನಂಬರ್ ದೇವಳವಾಗಿ ಮುಂದುವರೆದಿದೆ. ಕಳೆದ ವರ್ಷ ಶ್ರೀ ದೇವಳವು 123 ಕೋಟಿ ರೂ. ಆದಾಯ ಗಳಿಸಿತ್ತು.

ಹಲವು ವರ್ಷಗಳಿಂದ ನಿರಂತರವಾಗಿ ಆದಾಯ ಗಳಿಕೆಯಲ್ಲಿ ರಾಜ್ಯದ ನಂಬರ್ ದೇವಸ್ಥಾನವಾಗಿ ಹೊರ ಹೊಮ್ಮಿರುವ ಕುಕ್ಕೆಯು ಈ ಬಾರಿ 146.01 ಕೋಟಿ ರೂ. ಆದಾಯ ಗಳಿಸುವ ಮೂಲಕ ಸತತವಾಗಿ ನಂಬರ್ ಒನ್ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.

ಉಳಿದಂತೆ ರಾಜ್ಯ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳ ಆದಾಯ ಹೀಗಿದೆ:

ದೇವಾಲಯಗಳು ಆದಾಯ (2023-2024)
ಕೊಲ್ಲೂರು ಮೂಕಾಂಬಿಕಾ ದೇವಳ68.23 ಕೋಟಿ ರೂ.
ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ30.73 ಕೋಟಿ ರೂ.
ಸವದತ್ತಿ ರೇಣುಕಾ ಯಲ್ಲಮ್ಮ ದೇವಾಲಯ25.80 ಕೋಟಿ ರೂ.
ಕೊಪ್ಪಳ ಜಿಲ್ಲೆ ಹುಲಿಗೆಮ್ಮ ದೇವಿ ದೇವಸ್ಥಾನ16.29 ಕೋಟಿ ರೂ.
ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ15.27 ಕೋಟಿ ರೂ.
ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ13.65 ಕೋಟಿ ರೂ.
ಬೆಂಗಳೂರಿನ ಬನಶಂಕರಿ ದೇವಸ್ಥಾನ 11.37 ಕೋಟಿ ರೂ.

ದೇವಸ್ಥಾನಕ್ಕೆ ಮುಖ್ಯವಾಗಿ ಗುತ್ತಿಗೆಗಳಿಂದ, ತೋಟದ ಉತ್ಪನ್ನದಿಂದ, ಕಟ್ಟಡ ಬಾಡಿಗೆಯಿಂದ, ಕಾಣಿಕೆಯಿಂದ, ಕಾಣಿಕೆ ಹುಂಡಿಯಿಂದ, ಹರಕೆ ಸೇವೆಗಳಿಂದ, ಅನುದಾನದಿಂದ, ಶಾಶ್ವತ ಸೇವೆಗಳಿಂದ, ಸೇವೆಗಳಿಂದ ಆದಾಯ ಬರುತ್ತಿದೆ. ಶ್ರೀ ದೇವಳದಲ್ಲಿ ಆದಾಯದ ಒಟ್ಟು ಲೆಕ್ಕಾಚಾರ ಈಗಾಗಲೇ ಮುಗಿದಿದೆ. ಉಳಿದಂತೆ ಸೇವೆ ಕಾಣಿಕೆ ಮೊದಲಾದುವುಗಳಿಂದ ಬಂದ ಆದಾಯದ ವಿಭಜನೆ ಇದೀಗ ನಡೆಯುತ್ತಿದ್ದು, ಈ ಲೆಕ್ಕಾಚಾರವು ಇನ್ನೆರಡು ದಿನಗಳಲ್ಲಿ ದೊರಕಲಿದೆ.

2006-07ರಲ್ಲಿ ದೇವಳದ ಆದಾಯವು 19.76 ಕೋಟಿ ರೂ. ಆಗಿತ್ತು. 2007-08 ರಲ್ಲಿ 24.44 ಕೋಟಿ ರೂ.ಗಳಿಗೆ ಆದಾಯವು ಹೆಚ್ಚಾಗಿ ರಾಜ್ಯದ ಶ್ರೀಮಂತ ದೇವಾಲಯವಾಗಿ ಪರಿಗಣಿತವಾಯಿತು. ನಂತರದ ವರ್ಷಗಳಲ್ಲಿ ರಾಜ್ಯದ ನಂ.1 ದೇವಸ್ಥಾನವೆಂದು ಪರಿಗಣಿಸಲ್ಪಟ್ಟಿತು.

ವರ್ಷಆದಾಯ
2006-07 19.76 ಕೋಟಿ ರೂ.
2007-08 24.44 ಕೋಟಿ ರೂ.
2008-09 31 ಕೋಟಿ ರೂ.
2009-10 38.51 ಕೋಟಿ ರೂ.
2011-12 56.24 ಕೋಟಿ ರೂ.
2012-13 66.76 ಕೋಟಿ ರೂ.
2013-14 68 ಕೋಟಿ ರೂ.
2014-15 77.60 ಕೋಟಿ ರೂ.
2015-16 88.83 ಕೋಟಿ ರೂ.
2016-17 89.65 ಕೋಟಿ ರೂ.
2017-18 95.92 ಕೋಟಿ ರೂ.
2018-19 92.09 ಕೋಟಿ ರೂ.
2019-20 98.92 ಕೋಟಿ ರೂ.
2020-21 68.94 ಕೋಟಿ ರೂ.
2021-22 72.73 ಕೋಟಿ ರೂ.
2022-23123 ಕೋಟಿ ರೂ.
2023-24146.01 ಕೋಟಿ ರೂ.

ಇದನ್ನೂ ಓದಿ: ಬಳ್ಳಾರಿ: ದಾಖಲೆ ಇಲ್ಲದ ₹5.60 ಕೋಟಿ ನಗದು, 3 ಕೆಜಿ ಚಿನ್ನ, 124 ಕೆಜಿ ಬೆಳ್ಳಿ ಜಪ್ತಿ - Ballari Police Raid

ETV Bharat Logo

Copyright © 2024 Ushodaya Enterprises Pvt. Ltd., All Rights Reserved.