ETV Bharat / state

ಮೈಸೂರಿನಲ್ಲಿ ಫೆಬ್ರವರಿ 10 ರಿಂದ 12 ರವರೆಗೆ ಕುಂಭಮೇಳ - MYSURU KUMBH MELA

ಫೆಬ್ರವರಿ 10 ರಿಂದ 12 ರವರೆಗೆ ನಡೆಯುವ ಮೈಸೂರು ಕುಂಭ ಮೇಳದಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಅಧಿಕಾರಿಗೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ ನೀಡಿದರು.

Minister Dr HC Mahadevappa and Legislative Council member Dr Yatindra at the press conference
ಸುದ್ದಿಗೋಷ್ಠೀಯಲ್ಲಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ (ETV Bharat)
author img

By ETV Bharat Karnataka Team

Published : Jan 19, 2025, 5:06 PM IST

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ ಕುಂಭಮೇಳ 2025 ಅನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ ನೀಡಿದರು.

ಇಂದು ಕುಂಭ ಮೇಳ -2025ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸುದ್ದಿಗೋಷ್ಠೀಯಲ್ಲಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ (ETV Bharat)

ಪ್ರಥಮ ಬಾರಿಗೆ 1989ರಲ್ಲಿ ಈ ಕುಂಭಮೇಳ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ, ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆಎಸ್​ಆರ್​ಟಿಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್​ಗಳ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಲಕ್ಷಾಂತರ ಭಕ್ತರು ಭಾಗಿ ಸಾಧ್ಯತೆ: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಮಾತನಾಡಿ, 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಫೆಬ್ರವರಿ 11 ರಂದು ಕಾವೇರಿ ಆರತಿ ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಛತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಛತೆ ಕಾಪಾಡಬೇಕು. ಫೈರ್ ಸೇಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಕೊನೆಯದಾಗಿ 2019ರಲ್ಲಿ ಕುಂಭಮೇಳ ನಡೆಯಿತು. ಕೋವಿಡ್ ಇದ್ದುದರಿಂದ 2021 ರಲ್ಲಿ ಕುಂಭಮೇಳ ನಡೆಯಲಿಲ್ಲ. ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಹಾ ಕುಂಭಮೇಳ 2025 : ನಾಗಾ ಸಾಧುಗಳು ಎಂದರೆ ಯಾರು?- ಏನಿವರ ಮಹತ್ವ?: ಇಲ್ಲಿದೆ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.