ETV Bharat / state

ಕುಂಭಮೇಳ: ಪ್ರಯಾಗ್​ ರಾಜ್​​ಗೆ ಹುಬ್ಬಳ್ಳಿ, ಮೈಸೂರಿನಿಂದ ವಿಶೇಷ ರೈಲು - ಇಲ್ಲಿದೆ ವೇಳಾಪಟ್ಟಿ - KUMBHAMELA SPECIAL TRAIN

ಕುಂಭಮೇಳಕ್ಕೆ ತೆರಳುವವರಿಗೆ ಹುಬ್ಬಳ್ಳಿ ಮತ್ತು ಮೈಸೂರಿನಿಂದ ಪ್ರಯಾಗ್ ರಾಜ್​​ಗೆ ವಿಶೇಷ ಏಕಮುಖ ಎಕ್ಸ್​ಪ್ರೆಸ್​ ರೈಲು ಸೇವೆಯನ್ನು ನೈಋತ್ಯ ರೈಲ್ವೆ ಒದಗಿಸಿದೆ.

ಪ್ರಯಾಗ್​ ರಾಜ್​​ಗೆ ಹುಬ್ಬಳ್ಳಿ, ಮೈಸೂರಿನಿಂದ ವಿಶೇಷ ರೈಲು
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : 12 hours ago

ಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಹುಬ್ಬಳ್ಳಿ ಹಾಗೂ ಮೈಸೂರಿನಿಂದ ಪ್ರಯಾಗ್ ರಾಜ್​​ಗೆ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು ಸೇವೆ ನೀಡಲಿದೆ.

ಮೈಸೂರಿನಿಂದ ವಿಶೇಷ ರೈಲು: ಮೈಸೂರು-ಪ್ರಯಾಗ್ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23, 2024 (ಸೋಮವಾರ) 00:30 ಗಂಟೆಗೆ ಮೈಸೂರಿನಿಂದ ಹೊರಟು, ಬುಧವಾರ 3:00 ಗಂಟೆಗೆ ಪ್ರಯಾಗ್ ರಾಜ್ ಜಂಕ್ಷನ್ ತಲುಪಲಿದೆ.

ಎಲ್ಲಿಲ್ಲಿ ನಿಲುಗಡೆ: ಮಾರ್ಗಮಧ್ಯದಲ್ಲಿ, ಈ ರೈಲು ಮಂಡ್ಯಾ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬನಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು: ಹುಬ್ಬಳ್ಳಿಯಿಂದ ಪ್ರಯಾಗ್‌ ರಾಜ್‌ಗೆ ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ ರೈಲಿನ ವಿವರಗಳು ಈ ಕೆಳಗಿನಂತಿವೆ:

ಡಿಸೆಂಬರ್ 26, 2024 (ಗುರುವಾರ) ರಂದು ಎಸ್ಎಸ್ಎಸ್ ಹುಬ್ಬಳ್ಳಿ-ಪ್ರಯಾಗ್‌ರಾಜ್ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07369) ರೈಲು ಹುಬ್ಬಳ್ಳಿಯಿಂದ 11:00 ಗಂಟೆಗೆ ಹೊರಟು, ಶನಿವಾರ 03:00 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.

ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬಾನಾಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ರೈಲು 11 ಸ್ಲೀಪರ್ ಕ್ಲಾಸ್, ಏಳು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎಸ್ಎಲ್ಆರ್​​ಡಿ ಸೇರಿದಂತೆ ಒಟ್ಟು 20 ಬೋಗಿಗಳನ್ನು ಹೊಂದಿರುತ್ತದೆ.

ಈ ರೈಲಿನ ಆಗಮನ ಮತ್ತು ನಿರ್ಗಮನದ ಸಮಯವನ್ನು ತಿಳಿಯಲು, ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್​ಸೈಟ್ (www.enquiry.indianrail.gov.in) ಭೇಟಿ ನೀಡಿ, 139 ನಂಬರ್​ಗೆ ಡಯಲ್ ಮಾಡಿ ಅಥವಾ NTES ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 2018ರಲ್ಲಿ ಸ್ಥಗಿತಗೊಂಡಿದ್ದ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಮತ್ತೆ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.