ETV Bharat / state

ರೈತರ ಪಾಲಿಗೆ ನಿರಾಶದಾಯಕ ಬಜೆಟ್, ಆದಾಯ ದ್ವಿಗುಣಗೊಳಿಸುವ ಭರವಸೆ ಹುಸಿಯಾಗಿದೆ: ಕುರುಬೂರು ಶಾಂತಕುಮಾರ - ಸಚಿವೆ ನಿರ್ಮಲಾ ಸೀತಾರಾಮನ್

ಪ್ರಧಾನಿ ಮೋದಿ ಸರ್ಕಾರದ ಮೇಲೆ ರೈತರು ಇಟ್ಟಿದ್ದ ಭರವಸೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮುಂಗಡ ಪತ್ರದಲ್ಲಿ ಈಡೇರಿಸಿಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

Kuruburu Shanthakumar
ಕುರುಬೂರು ಶಾಂತಕುಮಾರ್
author img

By ETV Bharat Karnataka Team

Published : Feb 1, 2024, 4:45 PM IST

ಬೆಂಗಳೂರು: ಕೇಂದ್ರ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಶದಾಯಕವಾಗಿದೆ. ಪ್ರಧಾನಿ ಮೋದಿ ಸರ್ಕಾರದ ಮೇಲೆ ರೈತರು ಇಟ್ಟಿದ್ದ ಭರವಸೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ ಮುಂಗಡ ಪತ್ರದಲ್ಲಿ ಈಡೇರಿಸಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೋದಿ ಭರವಸೆ ಹುಸಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು. ಅದು ಸಹ ಹುಸಿಯಾಗಿದೆ. ಕೇಂದ್ರ ಸರ್ಕಾರದಿಂದ ರೈತರ ಅಭ್ಯುದಯ ಈವರೆಗೂ ಸಾಧ್ಯವಾಗಿಲ್ಲ ಎಂದು ಬಜೆಟ್ ಬಗ್ಗೆ ಈಟಿವಿ ಭಾರತ ಜೊತೆಗೆ ಕುರುಬೂರು ಶಾಂತಕುಮಾರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ನಿರ್ಲಕ್ಷ್ಯ: ಕೃಷಿಕರ ಅಭಿವೃದ್ಧಿಗೆ ಸ್ವಾಮಿನಾಥನ್ ವರದಿ ಅನುಷ್ಠಾನ ಮಾಡುವುದಾಗಿ ಪ್ರಧಾನಿ ಆಶ್ವಾಸನೆ ನೀಡಿದ್ದರು. ಅದನ್ನೂ ಸಹ ಈಡೇರಿಸಿಲ್ಲ. ರೈತರು ಬರಗಾಲದ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡುತ್ತಾರೆ ಎನ್ನುವ ನಿರೀಕ್ಷೆಗಳಿದ್ದವು, ಅದೂ ಸಹ ಸುಳ್ಳಾಗಿದೆ ಎಂದರು.

ಬರಗಾಲದಿಂದ ರೈತರಿಗೆ ಸಂಕಷ್ಟ : ದೇಶದಲ್ಲಿ ರೈತರು ಕೃಷಿ ಚಟುವಟಿಕೆಗಾಗಿ ಬ್ಯಾಂಕ್​ಗಳಿಂದ 12 ಲಕ್ಷ ಕೋಟಿ ಸಾಲ ಪಡೆದಿದ್ದಾರೆ. ಬರಗಾಲ ಮತ್ತು ಬೆಲೆ ಕುಸಿತದಿಂದಾಗಿ ಸಾಲ ಪಾವತಿಸಲಾಗದೆ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದರೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರೈತರ ಪರ ಎನ್ನುವ ಅಭಿಪ್ರಾಯ ಮೂಡುತ್ತಿತ್ತು ಎಂದರು.

ಸೌರ ವಿದ್ಯುತ್ ಯೋಜನೆಗೆ ಸ್ವಾಗತ: ಬಜೆಟ್ ನಲ್ಲಿ ಒಂದು ಕೋಟಿ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ. ಈ ಯೋಜನೆಯನ್ನು ನಾನು ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮ ಜನಸಾಮಾನ್ಯರನ್ನು ಸ್ವಾವಲಂಬನೆ ಮಾಡುವಂತಹ ಯೋಜನೆಯಾಗಿದೆ ಎಂದು ರೈತ ಮುಖಂಡ ಶಾಂತಕುಮಾರ್ ತಿಳಿಸಿದ್ದಾರೆ.

ಇದನ್ನೂಓದಿ:ಕೇಂದ್ರದ ಮಧ್ಯಂತರ ಬಜೆಟ್: ಹುಬ್ಬಳ್ಳಿಯಲ್ಲಿ ಮಿಶ್ರ ಪ್ರತಿಕ್ರಿಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.