ETV Bharat / state

ದೆಹಲಿಯಲ್ಲಿ ರೈತರು ಭಿಕ್ಷೆ ಬೇಡುತ್ತಿಲ್ಲ, ಸರ್ಕಾರವೇ ನಿಗದಿ ಮಾಡುವ ಬೆಂಬಲ ಬೆಲೆ ಖಾತರಿ ಕಾನೂನು ಕೇಳುತ್ತಿದ್ದಾರೆ: ಕುರುಬೂರು ಶಾಂತಕುಮಾರ್

author img

By ETV Bharat Karnataka Team

Published : Feb 21, 2024, 3:29 PM IST

ರೈತರು ಸರ್ಕಾರದ ಭಿಕ್ಷುಕರೇ ಅಥವಾ ದೇಶದ ಜನರಿಗೆ ಆಹಾರ ನೀಡುವ ಅನ್ನದಾತರೇ? ಎಂದು ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ನೋಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ಮುಖಂಡ ಕುರುಬೂರು ಶಾಂತಕುಮಾರ್ ಅವರು ಹೇಳಿದರು.

ಕುರುಬೂರ್ ಶಾಂತಕುಮಾರ್
ಕುರುಬೂರ್ ಶಾಂತಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ 23 ಬೆಳೆಗಳಿಗೆ ಎಂಎಸ್​ಪಿ ಬೆಲೆ ನಿಗದಿ ಮಾಡಬೇಕು. ಮೊದಲಿನಿಂದ ದೇಶದ ರೈತರನ್ನು ಕತ್ತಲಲ್ಲಿ ಇಡಲಾಗಿದೆ. ಸರ್ಕಾರವೇ ನಿಗದಿ ಮಾಡುವ ಬೆಲೆಗೆ ಶಾಸನಬದ್ಧ ಖಾತರಿ ನೀಡಬೇಕು ಎಂದು ಹೋರಾಟ ಮಾಡಿದರೆ, ರೈತರನ್ನು ಭಯೋತ್ಪಾದಕರು, ದೇಶದ್ರೋಹಿಗಳು, ಖಲಿಸ್ತಾನಿಗಳು ಎಂದು ಹೇಳಿ ದೆಹಲಿಗೆ ಚಳವಳಿಗೆ ಹೊರಟ ರೈತ ಹೋರಾಟಗಾರರ ಮೇಲೆ ರಬ್ಬರ್ ಬುಲೆಟ್​ಗಳ ಬಾಂಬು ಹಾಕುವುದು, ಅಶ್ರುವಾಯು ಸಿಡಿಸುವುದು, ದಮನಕಾರಿ ನೀತಿಯನ್ನು ಅನುಸರಿಸಲಾಗುತ್ತಿದೆ. ರೈತರು ಸರ್ಕಾರದ ಭಿಕ್ಷುಕರೇ ಅಥವಾ ದೇಶದ ಜನರಿಗೆ ಆಹಾರ ನೀಡುವ ಅನ್ನದಾತರೇ? ಎಂದು ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ನೋಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದರು.

ಪ್ರೆಸ್​ ಕ್ಲಬ್​ನಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಸ್ವಾಮಿನಾಥನ್ ವರದಿಯ ಪ್ರಕಾರ ಬೆಂಬಲ ಬೆಲೆ ನೀಡಬೇಕು. ಡಬ್ಲ್ಯೂಟಿಓ ಒಪ್ಪಂದದಿಂದ ಭಾರತ ಸರ್ಕಾರ ಹೊರಗೆ ಬರಬೇಕು. ರೈತರಿಗೆ ಪಿಂಚಣಿ ನೀಡುವ ಯೋಜನೆ, ಫಸಲ್ ಭೀಮಾ ಬೆಳೆ ವಿಮೆ ಪದ್ಧತಿ ಬದಲಾಗಬೇಕು. ಕಳೆದ ವರ್ಷ ದೆಹಲಿ ರೈತ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತ ಕುಟುಂಬಕ್ಕೆ ಸರ್ಕಾರದ ನೆರವು ನೀಡಬೇಕು. ಕುಟುಂಬದ ಒಬ್ಬರಿಗೆ ನೌಕರಿ ನೀಡಬೇಕು ಎಂಬ ಒತ್ತಾಯಗಳನ್ನು ಮಂಡಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ವಿನಾಕಾರಣ ವಿಳಂಬ ನೀತಿ ಅನುಸರಿಸಿ ಚೌಕಾಸಿ ಮಾಡುತ್ತಿದೆ ಎಂದು ದೂರಿದರು.

ಭಾರತದಲ್ಲಿ ಕಬ್ಬಿನ ಎಫ್‌ಆರ್‌ಪಿ ದರ ನಿಗದಿ ಮಾಡುವ ನೀತಿಯನ್ನು ಕೈಬಿಡಬೇಕು ಎಂದು ಅಮೆರಿಕ ಹಾಗೂ ಇನ್ನೂ ಕೆಲವು ರಾಷ್ಟ್ರಗಳು ಡಬ್ಲ್ಯೂಟಿಓನಲ್ಲಿ ಕೇಸ್ ದಾಖಲಿಸಿ ಒತ್ತಾಯ ಮಾಡುತ್ತಿವೆ. ಅದಕ್ಕಾಗಿ ವಿಶ್ವ ವ್ಯಾಪಾರ ಒಪ್ಪಂದ ಸಂಸ್ಥೆಯ ಸಭೆ 26 ರಿಂದ 29ರ ತನಕ ಅಬುದಾಬಿಯಲ್ಲಿ ನಡೆಯುತ್ತಿದೆ. ಡಬ್ಲ್ಯೂಟಿಓ ಒಪ್ಪಂದದಿಂದ ಆಗಿರುವ ಭಾರತ ದೇಶದ ರೈತರ ಸಂಕಷ್ಟದ ಪರಿಸ್ಥಿತಿಯನ್ನು ವಿವರಿಸಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯಿಂದ ನನಗೂ ಸೇರಿದಂತೆ ಮೂರು ಜನ ರೈತ ಮುಖಂಡರಿಗೆ ಸಭೆಯಲ್ಲಿ ಭಾಗವಹಿಸಲು ಆಮಂತ್ರಣ ಬಂದಿದೆ. ಅದರಲ್ಲಿ ನಾವು ಭಾಗವಹಿಸುತ್ತಿದ್ದೇವೆ ಎಂದು ಹೇಳಿದರು.

ಕುರುಬೂರು ಶಾಂತಕುಮಾರ್
ಕುರುಬೂರು ಶಾಂತಕುಮಾರ್

ರೈತರ ಸಮಸ್ಯೆ ಬಗೆಹರಿಸಲು ಒತ್ತಾಯಿಸಬೇಕು: ರಾಜ್ಯದಲ್ಲಿ ರೈತರ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡು ರೈತ ಮುಖಂಡರು ರಾಜಕೀಯ ಪಕ್ಷಗಳ ಅಡಿಯಾಳುಗಳಾಗಿ ಕಾರ್ಯನಿರ್ವಹಿಸುವ ಬದಲು, ರೈತರ ಸಂಕಷ್ಟ ನಿವಾರಣೆ ಮಾಡುವ ಸಮಯ ಒದಗಿಬಂದಿದೆ. ಈಗಲಾದರೂ ರೈತರ ಹಿತಾಸಕ್ತಿಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಹೋರಾಟಕ್ಕಾಗಿ ಬೀದಿಗೆ ಬಂದಿದ್ದೇವೆ. ರಾಜಕೀಯ ಪಕ್ಷದ ಹಲವು ಕಾರ್ಯಕರ್ತರು ಅನ್ನ ತಿನ್ನುತ್ತಿದ್ದಾರೆ. ನಮ್ಮ ಬಾಯಿಗೆ ನಾವೇ ಮಣ್ಣು ಹಾಕಿಕೊಳ್ಳಬಾರದು ಎಂಬುದನ್ನು ಅರಿಯದೆ, ದೆಹಲಿಯ ರೈತ ಹೋರಾಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಗುರವಾಗಿ ಚಳವಳಿಯನ್ನು ಟೀಕಿಸಿ ಮಾತನಾಡುವುದನ್ನು ನಿಲ್ಲಿಸಬೇಕು. ಅದನ್ನು ಬಿಟ್ಟು ರೈತರ ಸಮಸ್ಯೆ ಬಗೆಹರಿಸಲು ಒತ್ತಾಯಿಸಬೇಕು. ಆಗ ಬದುಕು ಸಾರ್ಥಕವಾಗುತ್ತದೆ ಎಂದು ಕುರುಬೂರು ಶಾಂತಕುಮಾರ್​ ತಿಳಿಸಿದರು.

ಕೇಂದ್ರ ಸರ್ಕಾರದ ಜೊತೆ ಈಗ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದೆ. ಮಾತುಕತೆ ನೆಪದಲ್ಲಿ ವಿಳಂಬ ಧೋರಣೆ ಅನುಸರಿಸುವುದನ್ನು ಬಿಟ್ಟು ಸಮಸ್ಯೆ ಬಗೆಹರಿಸಬೇಕು. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನದ ಲಕ್ಷಾಂತರ ರೈತರು ಶಾಂತಿಯುತವಾಗಿ ದೆಹಲಿ ಚಲೋ ನಡೆಸುತ್ತಿದ್ದಾರೆ. ಸಮಸ್ಯೆ ಬಗೆಹರಿಯುವ ತನಕ ಚಳವಳಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯಾದ್ಯಂತ ರೈತರ ಹೋರಾಟಕ್ಕೆ ಕರೆ ನೀಡಲಾಗುವುದು : ದೆಹಲಿ ಹೋರಾಟದ ಜೊತೆ ಸಾಗಲು ರಾಜ್ಯದಲ್ಲಿಯೂ ಪ್ರಬಲ ಹೋರಾಟ ರೂಪಿಸಲು ನಾಳೆ ರೈತ ಸಂಘಟನೆಗಳ ಮುಖಂಡರ ಜೊತೆ ಗೂಗಲ್ ಮೀಟ್​ನಲ್ಲಿ ಸಭೆ ನಡೆಸಿ, ತೀರ್ಮಾನಿಸಲಾಗುತ್ತದೆ. ಅಲ್ಲಿ ಏಕಕಾಲದಲ್ಲಿ ರಾಜ್ಯಾದ್ಯಂತ ರೈತರ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ನಾರಾಯಣ ರೆಡ್ಡಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ನೆಲಮಂಗಲ ತಾಲೂಕು ಘಟಕದ ಅಧ್ಯಕ್ಷ ರಾಜೇಶ್, ಹಾರೋಹಳ್ಳಿ ಗಜೇಂದ್ರಸಿಂಗ್, ಕನಕಪುರ ಶಿವಕುಮಾರ್, ನರಸಿಂಹಯ್ಯ, ಕೊಳ್ಳೇಗಾಲ ತಾಲೂಕು ಮಾದೇಶ್, ವೆಂಕಟೇಶ್ ಮುಂತಾದವರು ಇದ್ದರು.

ಇದನ್ನೂ ಓದಿ : ರಾಜ್ಯ ಬಜೆಟ್​ ಬಗ್ಗೆ ಕುರುಬೂರು ಶಾಂತಕುಮಾರ್ ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.