ETV Bharat / state

ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರ್ಮಿಕ ಸಚಿವ ಸಂತೋಷ್​ ಲಾಡ್ ಅವರು ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ್ದಾರೆ.

labor-minister-santosh-lad-conduct-janatha-darshana
ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ (ETV Bharat)
author img

By ETV Bharat Karnataka Team

Published : 2 hours ago

ಧಾರವಾಡ : ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್​ ಲಾಡ್ ಅವರು, ವಿಕಲಚೇತನ ವ್ಯಕ್ತಿಯ ಸಮಸ್ಯೆ ತಿಳಿಯಲು ಅವರ ಜೊತೆ ನೆಲದ ಮೇಲೆ ಕುಳಿತು ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದ್ದಾರೆ.

ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 7ನೇ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಮಹಾನಗರ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಂಘ, ಸಂಸ್ಥೆ ಹಾಗೂ ಸಾರ್ವಜನಿಕರಿಂದ ಸುಮಾರು 213 ಅಹವಾಲುಗಳನ್ನು ಸ್ವೀಕರಿಸಲಾಯಿತು.

ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ (ETV Bharat)

ಸಾರ್ವಜನಿಕರಿಂದ ಅಹವಾಲು, ಮನವಿಗಳನ್ನು ಸ್ವೀಕರಿಸಿ ಮಾತನಾಡಿದ ಸಚಿವ ಸಂತೋಷ್ ಲಾಡ್ ಅವರು, ''ಸಲ್ಲಿಕೆ ಆಗಿರುವ ಎಲ್ಲ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತದೆ. ಆದರೆ, ಕೆಲವು ಮನವಿಗಳು ಸರ್ಕಾರದ ನೀತಿ, ನಿರೂಪಣೆಗೆ ಒಳಪಡಬೇಕಾಗುತ್ತದೆ. ಮತ್ತು ಕೆಲವು ಕೋರ್ಟ್‌ ವ್ಯಾಜ್ಯಗಳಾಗಿರುತ್ತವೆ. ಇವುಗಳಿಗೆ ಹಿಂಬರಹ ನೀಡಿ ಕಳುಹಿಸಲಾಗುತ್ತದೆ. ಕೆಲವು ಸಾರ್ವಜನಿಕರು ತಮ್ಮ ವೈಯಕ್ತಿಕ ಸಮಸ್ಯೆ, ಆಸ್ತಿ ಜಗಳ, ಸಂಬಂಧಿಕರ ಕೇಸ್, ಆಂತರಿಕ ಜಗಳ ಹೀಗೆ ವಿವಿಧ ರೀತಿಯ ಸಮಸ್ಯೆಗಳನ್ನು ಸಲ್ಲಿಸುತ್ತಾರೆ. ಇವುಗಳನ್ನು ಸಹ ಸಹಾನುಭೂತಿಯಿಂದ ಪರಿಶೀಲಿಸಿ, ಸಾಧ್ಯವಾದಷ್ಟು ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಲಾಗುತ್ತಿದೆ'' ಎಂದು ಅವರು ಹೇಳಿದರು.

labor-minister-santosh-lad-conduct-janatha-darshana
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್​ ಲಾಡ್​ (ETV Bharat)

ಅರ್ಜಿದಾರರಿಗೆ ಹಿಂಬರಹ ನೀಡಲಾಗಿದೆ: ಜಿಲ್ಲಾ ಮಟ್ಟದಲ್ಲಿ ನಡೆದ ಕಳೆದ ಆರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಸುಮಾರು 1242 ಅಹವಾಲುಗಳನ್ನು ಮತ್ತು ಇಂದಿನ 7ನೇ ಸಭೆಯಲ್ಲಿ 213 ಅಹವಾಲುಗಳು ಸೇರಿ ಇಲ್ಲಿವರೆಗೆ ಒಟ್ಟು 1455 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಇಂದು ಸಲ್ಲಿಕೆ ಆಗಿರುವ ಅರ್ಜಿಗಳನ್ನು ಹೊರತುಪಡಿಸಿ ಹಿಂದಿನ ಎಲ್ಲ ಅಹವಾಲು, ಅರ್ಜಿಗಳನ್ನು ಜಿಲ್ಲಾ ಮಟ್ಟದಲ್ಲಿ ಇತ್ಯರ್ಥಗೊಳಿಸಿ, ಅರ್ಜಿದಾರರಿಗೆ ಹಿಂಬರಹ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

7ನೇ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ (ETV Bharat)

ಕಾರ್ಮಿಕ ಸಚಿವರ ಈ ನಡೆಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದರು. ತಮ್ಮ ಸಂತೋಷ್‌ ಲಾಡ್‌ ಫೌಂಡೇಶನ್ ಮೂಲಕ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ಲಾಡ್‌ ಅವರು ಭರವಸೆ ನೀಡಿದರು.

ಜನರ ಸಮಸ್ಯೆ ಆಲಿಸಿದ ಸಚಿವ ಸಂತೋಷ್ ಲಾಡ್ (ETV Bharat)

ವಿವಿಧ ಅಹವಾಲುಗಳನ್ನು ಹೇಳಿಕೊಂಡು ಬರುವವರಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುವ ಲಾಡ್‌ ಅವರು, ಫೌಂಡೇಶನ್‌ ಮೂಲಕ ಹಲವಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ.

ಇದನ್ನೂ ಓದಿ : ಇಂದಿನ ಜನತಾ ದರ್ಶನದಲ್ಲಿ 405ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ : ಸಾವಿರಕ್ಕೂ ಹೆಚ್ಚು ಜನರ ಅಹವಾಲು ಆಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.