ETV Bharat / state

ದೀಪ ಆರೋ ಮುಂಚೆ ದೊಡ್ಡದಾಗಿ ಉರಿಯುವಂತೆ ಅನಂತಕುಮಾರ್​ ಹೆಗಡೆ ವರ್ತಿಸುತ್ತಿದ್ದಾರೆ: ಲಕ್ಷ್ಮಣ್ ಸವದಿ - ವಿಜಯಪುರ

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ದ ಸಂಸದ ಅನಂತಕುಮಾರ್​ ಹೆಗಡೆ ಅವರು ವಾಗ್ದಾಳಿ ನಡೆಸಿರುವ ವಿಚಾರವಾಗಿ ಶಾಸಕ ಲಕ್ಷ್ಮಣ್ ಸವದಿ ಹಾಗು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿ ನೀಡಿದ್ದಾರೆ.

ಶಾಸಕ ಲಕ್ಷ್ಮಣ್ ಸವದಿ
ಶಾಸಕ ಲಕ್ಷ್ಮಣ್ ಸವದಿ
author img

By ETV Bharat Karnataka Team

Published : Feb 24, 2024, 3:50 PM IST

ವಿಜಯಪುರ: ದೀಪ ಆರೋ ಮುಂಚೆ ದೊಡ್ಡದಾಗಿ ಉರಿಯುವಂತೆ ಸಂಸದ ಅನಂತ​ಕುಮಾರ್​ ಹೆಗಡೆ ವರ್ತಿಸುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನಂತ​ಕುಮಾರ್​ ಹೆಗಡೆ ಅವರು ವಾಗ್ದಾಳಿ ನಡೆಸಿರುವ ವಿಚಾರವಾಗಿ ಲಕ್ಷ್ಮಣ್​ ಸವದಿ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಪ್ರತಿಕ್ರಿಯಿಸಿದರು.

ಅನಂತಕುಮಾರ್​ ಹೆಗಡೆ ರಾಜಕೀಯವಾಗಿ ‌ಕಳೆದು ಹೋಗುವ ಮುನ್ನ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವವನ್ನು ತಾವೇ ಕಳೆದುಕೊಳ್ಳುತ್ತಿರುವ ಸಮಯ ಪ್ರಾರಂಭವಾಗಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂದು ಲಕ್ಷ್ಮಣ್​ ಸವದಿ ಆಕ್ರೋಶ ವ್ಯಕ್ತಪಡಿಸಿದರು. ಹಿಂದೂ ದೇವಸ್ಥಾನಗಳ ಹಣವನ್ನು ಸರ್ಕಾರ ಬಳಕೆ ಮಾಡಿಕೊಳ್ಳುತ್ತಿರುವ ವಿಚಾರ ಬಿಜೆಪಿಗೆ ಅಸ್ತ್ರವಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಬಿಜೆಪಿಯವರು ಹತಾಶರಾಗಿದ್ದಾರೆ. ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲಲು ಕೇಂದ್ರದವರು ಟಾರ್ಗೆಟ್ ನೀಡಿದ್ದಾರೆ. ಗೆಲ್ಲಲು ಸಾಧ್ಯವಿಲ್ಲ ಎಂಬ ಭ್ರಮನಿರಸನದಲ್ಲಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

28 ಸ್ಥಾನ ಗೆಲ್ಲದಿದ್ದರೆ ಬಿಜೆಪಿಯಲ್ಲಿ ಬದಲಾವಣೆ ಆಗುತ್ತಾ? ಎಂಬ ಪ್ರಶ್ನೆಗೆ ಸವದಿ ಪ್ರತಿಕ್ರಿಯಿಸಿ, ಬದಲಾವಣೆ ಆಗೋ ಪ್ರಶ್ನೆ ಉದ್ಭವ ಆಗಲ್ಲ. ಈಗ ಎಲ್ಲಿ ಕೂರಬೇಕೋ ಅಲ್ಲಿ ಕೂತಿದ್ದಾರೆ. ಬದಲಾವಣೆ ಆಗಿಯೇ ಕೂತಿದ್ದಾರೆ ಎಂದು ಹೇಳಿದರು. ಮೇಕೆದಾಟು ಯೋಜನೆ ಕುರಿತು ದೊರೈ ಮುರುಗನ್‌ ಹೇಳಿಕೆ‌ ವಿಚಾರವಾಗಿ ಮಾತನಾಡಿ, ನಮ್ಮ ಸರ್ಕಾರ ಬಂದು ಎಂಟು ತಿಂಗಳಾಗಿದೆ. ಇನ್ನೂ ಅಧಿಕಾರಾವಧಿ ನಾಲ್ಕು ವರ್ಷ ನಾಲ್ಕು ತಿಂಗಳಿದೆ. ಅಷ್ಟರಲ್ಲಿ ಮೇಕಾದಾಟು, ಭದ್ರಾ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಹಂತ ಹಂತವಾಗಿ ಮಾಡಲಾಗುತ್ತದೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ಬಗ್ಗೆ ಮಾತನಾಡಿ, ರಾಷ್ಟ್ರೀಯ ಪಕ್ಷದಲ್ಲಿ ಅಂಥ ವಿಚಾರಗಳು ಸಹಜವಾಗಿ ಬರುತ್ತವೆ. ಯಾವ ಅಭ್ಯರ್ಥಿ ಸೂಕ್ತವಾಗುತ್ತಾರೆ ಅಂಥವರ ಸ್ಪರ್ಧೆ ಕುರಿತು ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಆ ತೀರ್ಮಾನಕ್ಕೆ ಬದ್ಧರಾಗಿ ಕೆಲಸ ಮಾಡುತ್ತೇವೆ. ನಾನು ರಾಜ್ಯ ರಾಜಕಾರಣದಲ್ಲೇ ಇರುವೆ ಎಂದು ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದರು.

ಚುನಾವಣೆ ಗಿಮಿಕ್ : ಮತ್ತೊಂದೆಡೆ ಸಚಿವ ಎಂ.ಬಿ ಪಾಟೀಲ್ ಅವರು ಅನಂತಕುಮಾರ್ ಹೆಗಡೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ತಿರುಗೇಟು ನೀಡಿದರು. ಅನಂತಕುಮಾರ್ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು. ಇವರು ಐದು ವರ್ಷ ಕಾಣೆಯಾಗಿದ್ದರು. ಎಲ್ಲಿಯೂ ಇರಲಿಲ್ಲ, ಮತದಾರರಿಗೆ ಮುಖ ಕೂಡ ತೋರಿಸಿರಲಿಲ್ಲ, ಚುನಾವಣೆ ಬಂದ ಕಾರಣ ಈ ರೀತಿ ಹೇಳಿಕೆ ನೀಡುವ ಮೂಲಕ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಬಯಸಿದ್ದಾರೆ. ಇಂಥವರ ಬಗ್ಗೆ ಬಹಳ ಮಾತನಾಡುವ ಅವಶ್ಯಕತೆಯಿಲ್ಲ. ಇದನ್ನು ಯಾರೂ ಗಂಭೀರವಾಗಿ ಪರಿಗಣಿಸಲ್ಲ. ಇದು ಚುನಾವಣೆ ಗಿಮಿಕ್ ಎಂದು ಹೇಳಿದರು.

ಇದನ್ನೂ ಓದಿ : ಸಂಸ್ಕೃತಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ: ಅನಂತ್ ಕುಮಾರ್​ ಹೆಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.