ETV Bharat / state

ರೀಲ್ಸ್​ ಮಾಡಿ ಬಹುಮಾನ ಗೆಲ್ಲಿ; 'ಗೃಹಲಕ್ಷ್ಮಿ'ಯರಿಗೆ ಸಚಿವೆ ಹೆಬ್ಬಾಳ್ಕರ್ ಕರೆ - GRUHALAKSHMI SCHEME - GRUHALAKSHMI SCHEME

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ಈ ಯೋಜನೆಯ ಫಲಾನುಭವಿಗಳು ರೀಲ್ಸ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದರಲ್ಲಿ ಹೆಚ್ಚು ವೀವ್ಸ್​ ಬಂದವರಿಗೆ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

Minister Lakshmi Hebbalkar
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (State Government)
author img

By ETV Bharat Karnataka Team

Published : Sep 1, 2024, 10:38 PM IST

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (State Government)

ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಮತ್ತೊಂದು ಸಂತಸದ ಸುದ್ದಿಯನ್ನು ಸರ್ಕಾರ ಕೊಟ್ಟಿದೆ. ‘ಗೃಹಲಕ್ಷ್ಮಿ' ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಬಹುಮಾನದ ಆಫರ್​ಅನ್ನು ಸಹ ಘೋಷಿಸಿದ್ದಾರೆ.

ಇಲ್ಲಿಯವರೆಗೆ ಗೃಹಲಕ್ಷ್ಮಿ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳುವಂತೆ ಸಚಿವರು ಕೋರಿದ್ದಾರೆ.

ರೀಲ್ಸ್ ಮಾಡಲು ಕರೆ : ಗೃಹಲಕ್ಷ್ಮಿ ಯೋಜನೆ ಸಂಬಂಧ ರೀಲ್ಸ್ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್​ಸ್ಟಾಗ್ರಾಂಗಳಲ್ಲಿ ಹಂಚಿಕೊಳ್ಳುವಂತೆ ಕೋರಿದ್ದಾರೆ.

ಯಾವ ಯಜಮಾನಿಯರು ಮಾಡಿದ ರೀಲ್ಸ್​ಗೆ ಹೆಚ್ಚು ವೀವ್ಸ್​ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್​ಗಳನ್ನು ಯುಟ್ಯೂಬ್, ಫೇಸ್​ಬುಕ್, ಇನ್​​ಸ್ಟಾಗ್ರಾಂಗಳಲ್ಲಿ ಹಂಚಿಕೊಳ್ಳಬೇಕಿದೆ. ಜಾಸ್ತಿ ವೀವ್ಸ್​ ಪಡೆದವರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ.

ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ. ಈ ಒಂದು ಗೃಹಲಕ್ಷ್ಮಿ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಗೃಹಲಕ್ಷ್ಮಿ ಯೋಜನೆಯ ಎಲ್ಲ ಮಹಿಳೆಯರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಮೆಚ್ಚುಗೆ: ರೇಷ್ಮೆ ಸೀರೆ ನೀಡಿ ಸನ್ಮಾನ - Grandmother Fed Holige Meal

ETV Bharat Logo

Copyright © 2025 Ushodaya Enterprises Pvt. Ltd., All Rights Reserved.