ETV Bharat / state

ಉಡುಪಿ: ಕಡಲ್ಕೊರೆತ, ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌ಭೇಟಿ - lakshmi hebbalkar - LAKSHMI HEBBALKAR

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಕಡಲ್ಕೊರೆತ ಮತ್ತು ನೆರೆ ಉಂಟಾಗಿರುವ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌ (ETV Bharat)
author img

By ETV Bharat Karnataka Team

Published : Jul 21, 2024, 5:29 PM IST

Updated : Jul 21, 2024, 8:09 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‌ (ETV Bharat)

ಉಡುಪಿ: ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆ‌ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಡಲ್ಕೊರೆತ ಹಾಗೂ ನೆರೆ ಉಂಟಾಗಿದ್ದು, ಈ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಜೆವರೆಗೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಜನರಿಗೆ ದೊರಕಬೇಕಾದ ಪರಿಹಾರವನ್ನು ಕೊಡಿಸುತ್ತೇವೆ ಎಂದು ಬರವಸೆ ನೀಡಿದರು. ಬಳಿಕ ಉಡುಪಿಯಲ್ಲಿ ಇದ್ದು ನೆರೆಹಾನಿ ನೋಡುವಂತೆ ಜನರ ಬೇಡಿಕೆ ಇದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಬಹಳ ಒಳ್ಳೆಯ ಮಾತು ಇಲ್ಲೇ ಮನೆ ಮಾಡಿರಲು ತಯಾರಿದ್ದೇನೆ. ಜವಾಬ್ದಾರಿ ಇದೆ ಸೆಶನ್ ನಡಿತಾ ಇದೆ ಇಂದು ಭಾನುವಾರ ರಜೆ ಇದ್ದಾಗಲೂ ಬಂದಿದ್ದೇನೆ. ನನ್ನ ಅವಶ್ಯಕತೆ ಇದ್ದಾಗ ಇಲ್ಲಿಗೆ ಬರುತ್ತೇನೆ. 24×7 ಜಿಲ್ಲಾಡಳಿತ, ಸರ್ಕಾರ ಎಚ್ಚರವಾಗಿದೆ. ಎಲ್ಲೂ ಯಾವ ತೊಂದರೆ ಆಗಬಾರದು ಪ್ರಾಣ ಹಾನಿ ಆಗಬಾರದು ಎಂದು ಮುನ್ನೆಚ್ಚರಿಕೆ ಕೈಗೊಂಡಿದ್ದೇವೆ ಎಂದರು.

25 ದಿನಗಳ ಹಿಂದೆ ಜಿಲ್ಲಾ ಮಟ್ಟದ ಸಭೆ ನಡೆಸಿದ್ದೇವೆ. ಅರಣ್ಯ ಇಲಾಖೆಗೆ ಸೂಚನೆ ಕೊಟ್ಟಿದ್ದೇನೆ. 500 ರಿಂದ 600 ಮರಗಳನ್ನು ತೆರವು ಮಾಡಲಾಗಿದೆ. ಮೆಸ್ಕಾಂನವರಿಗೆ ಈ ಮೊದಲೇ ಶಾಲೆಯ ಪಕ್ಕ ಇರುವ ವಯರ್​ಗಳನ್ನು ತೆರವು ಮಾಡಲು ಸೂಚನೆ ಕೊಟ್ಟಿದ್ದೇನೆ. ಅವರು ಕೂಡ ಅಪಾಯ ಇರುವಲ್ಲಿ ತೆರವು ಮಾಡಿದ್ದಾರೆ. ನಗರದಲ್ಲಿ ಚರಂಡಿಯಿಂದ ಸಮಸ್ಯೆ ಆಗಿತ್ತು, ಸ್ವಚ್ಛಗೊಳಿಸಿದ್ದಾರೆ. ಕಾಲು ಸಂಕಗಳ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇವೆ. ಜಿಲ್ಲಾಡಳಿತದಿಂದ ಹೆಲ್ಪ್​ಲೈನ್​ ಸಹ ಆರಂಭಿಸಿದ್ದೇವೆ ಎಂದು ತಿಳಿಸಿದರು.

ಬಳಿಕ ಕಡಲು ಕೊರೆತಕ್ಕೆ 5 ಕೋಟಿ ಬಿಡುಗಡೆ ಆಗದ ವಿಚಾರಕ್ಕೆ ಉತ್ತರ ನೀಡಿದ ಸಚಿವರು, ಹಳೆಬಾಕಿ ಪಾವತಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ತಕ್ಷಣ 5 ಕೋಟಿ ಬಿಡುಗಡೆಗೆ ಮನವಿ ಮಾಡಿದ್ದೇವೆ ಆದಷ್ಟು ಬೇಗ ಬಿಡುಗಡೆ ಆಗುತ್ತದೆ ಎಂದರು.

ಪರಿಹಾರ ವಿಚಾರವಾಗಿ ಮಾತನಾಡಿ, ಕಳೆದ ಬಾರಿ ಮಳೆಯಾದಾಗ ಮನೆ ಬಿದ್ದರೆ 5 ಲಕ್ಷ ಕೊಟ್ಟಿದ್ದೇವೆ. ಸರ್ಕಾರ ಬಂದ ಮೊದಲ ವರ್ಷದಲ್ಲಿ 5 ಲಕ್ಷ ಕೊಟ್ಟಿದ್ದೇವೆ. ಈ ಬಾರಿ ಇನ್ನು ನನಗೆ ಸ್ಪಷ್ಟತೆ ಸಿಕ್ಕಿಲ್ಲ. ನಾನು ಈ ಬಗ್ಗೆ ಯಾವುದೇ ಗೊಂದಲ ಸೃಷ್ಟಿ ಮಾಡುವುದಿಲ್ಲ. ಈ ವಿಷಯವನ್ನು ಆದಷ್ಟು ಬೇಗ ಸರ್ಕಾರಿ ಮಟ್ಟದಲ್ಲಿ ತೆಗೆದುಕೊಂಡು ಹೋಗುವುದಾಗಿ ಹೇಳಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಪಾಪಪ್ರಜ್ಞೆ ಕಾಡುತ್ತಿದೆ: ಹೆಚ್​.ಡಿ ಕುಮಾರಸ್ವಾಮಿ - H D Kumaraswamy

Last Updated : Jul 21, 2024, 8:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.