ETV Bharat / state

ಹಿಂದಿನ ಬಿಜೆಪಿ ಸರ್ಕಾರದ ಆದೇಶದಂತೆಯೇ ಜಿಂದಾಲ್​ಗೆ ಭೂಮಿ ನೀಡಲು ತೀರ್ಮಾನ: ಸಚಿವ ಎಂ.ಬಿ.ಪಾಟೀಲ್ - Land Allotment To Jindal - LAND ALLOTMENT TO JINDAL

ಹಿಂದಿನ ಬಿಜೆಪಿ ಸರ್ಕಾರದ ಆದೇಶದಂತೆಯೇ ಜಿಂದಾಲ್​ಗೆ ಭೂಮಿ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

m b patil
ಸಚಿವ ಎಂ.ಬಿ.ಪಾಟೀಲ್ (ETV Bharat)
author img

By ETV Bharat Karnataka Team

Published : Aug 25, 2024, 5:56 PM IST

ಬೆಂಗಳೂರು: ಬಿ.ಎಸ್​​. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಭೂಮಿ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾರ್ಚ್​​ 12ರಂದು) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ವಿಷಯದಲ್ಲಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪವು ನಿರಾಧಾರ. ಹಾಗೊಂದು ವೇಳೆ ಒಳ ಒಪ್ಪಂದ ಆಗಿದ್ದರೆ, ಅದು ಅವರದ್ದೇ ಪಕ್ಷದ ಸರ್ಕಾರದ ಜೊತೆ ಆಗಿರಬೇಕು ಎಂದು ಸಚಿವರು ತಿರುಗೇಟು ನೀಡಿದರು.

ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್​ ಮೊರೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ ₹90 ಸಾವಿರ‌ ಕೋಟಿ ರೂ. ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ ಎಂದು ಎಚ್ಚರಿಸಿದರು.

ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ, ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ನೀಡಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ ಎಂದು ಎಂ‌.ಬಿ. ಪಾಟೀಲ್ ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಶಾಸಕ ಬೆಲ್ಲದ ಅವರ ಜಾಣಮೌನ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಸ್ಥಾನದಿಂದ ಹೆಚ್​ಡಿಕೆ ಕೆಳಗಿಳಿಸಲು ಸಾಧ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ - Nikhil Kumaraswamy

ETV Bharat Logo

Copyright © 2025 Ushodaya Enterprises Pvt. Ltd., All Rights Reserved.