ETV Bharat / state

ಉತ್ತರ ಕನ್ನಡದ ಹೆದ್ದಾರಿ ಸೇರಿ ಹಲವೆಡೆ ಗುಡ್ಡ ಕುಸಿಯುವ ಭೀತಿ: ಅನುದಾನವಿಲ್ಲದೆ ಕೈಕಟ್ಟಿ ಕುಳಿತ ಜಿಲ್ಲಾಡಳಿತ - Highway Landslide

ಉತ್ತರ ಕನ್ನಡದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಯಿಂದಾಗಿ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ರಾಷ್ಟ್ರೀಯ ಹೆದ್ದಾರಿ 66
ರಾಷ್ಟ್ರೀಯ ಹೆದ್ದಾರಿ 66 (ETV Bharat)
author img

By ETV Bharat Karnataka Team

Published : Jun 11, 2024, 8:16 PM IST

ಹೆದ್ದಾರಿ ಮೇಲೆ ಗುಡ್ಡ ಕುಸಿಯುವ ಭೀತಿ (ETV Bharat)

ಕಾರವಾರ: ಜಿಲ್ಲೆಯಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮೊದಲ ಮಳೆಗೆ ಹಲವೆಡೆ ನೀರು ತುಂಬಿಕೊಂಡು ಅವಾಂತರಗಳಾಗಿವೆ. ಅರೆಬರೆಗೊಂಡಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಲ್ಲು ಬಂಡೆಗಳು ಹೆದ್ದಾರಿಗೆ ಉರುಳುತ್ತಿವೆ. ಕೆಲವೆಡೆ ಗುಡ್ಡವೇ ಕುಸಿಯುವ ಭೀತಿ ಇದೆ. ಹೀಗಾಗಿ, ಪ್ರಯಾಣಿಕರು ಪ್ರಾಣಭಯದಲ್ಲೇ ಸಂಚಾರ ಮಾಡುವಂತಾಗಿದೆ.

ಕಳೆದ 10 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ನಗರದ ಟನಲ್ ಬಳಿ ಗುಡ್ಡದಿಂದ ಕಲ್ಲುಗಳು ಉರಳಿ ಹೆದ್ದಾರಿಗೆ ಬಿದ್ದಿವೆ. ಆ ವೇಳೆ ಪ್ರಯಾಣಿಕರು ಯಾರೂ ಸಂಚರಿಸದ ಕಾರಣ ಅನಾಹುತ ತಪ್ಪಿದೆ. ಹೆದ್ದಾರಿ ಅಗಲೀಕರಣದ ವೇಳೆ ಕರಾವಳಿಯುದ್ದಕ್ಕೂ ಅವೈಜ್ಞಾನಿಕವಾಗಿ ತೆರವು ಮಾಡಿದ ಕೆಲ ಗುಡ್ಡಗಳು ಈಗಲೂ ಬಾಯ್ತೆರೆದಿವೆ.

ಕಾರವಾರದ ಮಾಜಾಳಿ ಗಡಿಯಿಂದ ಕುಂದಾಪುರದವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಳಿಸಲಾಗುತ್ತಿದೆ. ಆದರೆ ಜಿಲ್ಲೆಯ ಕರಾವಳಿಯುದ್ದಕ್ಕೂ ಅರೆಬರೆ ಕಾಮಗಾರಿಯಾಗಿದ್ದು, ಇದೀಗ ಐಆರ್‌ಬಿ ಕಂಪನಿ ಕೂಡ ಕಾಮಗಾರಿಯನ್ನು ಕೆಲವೆಡೆ ನಿಲ್ಲಿಸಿದೆ. ಇದರಿಂದಾಗಿ ಮಳೆಗಾಲದಲ್ಲಿ ಹೆದ್ದಾರಿ ಸಂಚಾರವೂ ಅಪಾಯಕಾರಿಯಾಗಿ ಪರಿಣಮಿಸಿದೆ. ಹೆದ್ದಾರಿಯುದ್ದಕ್ಕೂ ಒಮ್ಮೆಲೆ ಎದುರಾಗುವ ತಿರುವುಗಳು, ಸರಿಯಾದ ಸೂಚನಾ ಫಲಕಗಳಿಲ್ಲದ ಕಾರಣ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ.

ಈಗಷ್ಟೇ ಮಳೆಗಾಲ ಆರಂಭವಾಗಿರುವ ಕಾರಣ ಐಆರ್‌ಬಿ ಕಂಪನಿಗಳಿಗೆ ಸೂಚನೆ ನೀಡಿ ಅಗತ್ಯ ಮುಂಜಾಗ್ರತೆ ಕೈಗೊಳ್ಳುವಂತೆ ಚೆಂಡಿಯಾದ ದೀಪಕ್ ನಾಯ್ಕ ಆಗ್ರಹಿಸಿದ್ದಾರೆ.

ಕಳೆದೆರಡು ವರ್ಷಗಳ ಹಿಂದೆ ಜಿಲ್ಲೆಯ ಹತ್ತಕ್ಕೂ ಅಧಿಕ ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿತ್ತು. ಅದಾದ ಬಳಿಕ ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ಜಿಲ್ಲೆಯ ಸುಮಾರು 400ಕ್ಕೂ ಅಧಿಕ ಸ್ಥಳಗಳಲ್ಲಿ ಮತ್ತೆ ಗುಡ್ಡ ಕುಸಿಯುವ ವರದಿ ಸಲ್ಲಿಸಿತ್ತು. ಆದರೆ ಇದುವರೆಗೂ ಗುಡ್ಡ ಕುಸಿತ ಆತಂಕವಿರುವ ಸ್ಥಳಗಳಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ.

ಜಿಲ್ಲಾಧಿಕಾರಿ ಹೇಳುವುದೇನು?: ಈ ಬಗ್ಗೆ ಜಿಲ್ಲಾಧಿಕಾರಿಗಳನ್ನು ಕೇಳಿದರೆ, ಈಗಾಗಲೇ ಸರ್ಕಾರಕ್ಕೆ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಬಳಿಕ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಭೋರ್ಗರೆತ: ಐದು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ - Karnataka Monsoon

ETV Bharat Logo

Copyright © 2024 Ushodaya Enterprises Pvt. Ltd., All Rights Reserved.