ETV Bharat / state

ಪಲ್ಸ್​ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ

ಪಲ್ಸ್​ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮೈಸೂರಿನಲ್ಲಿ ಸಚಿವ ಹೆಚ್​.ಸಿ ಮಹದೇವಪ್ಪ ಚಾಲನೆ ನೀಡಿದರು.

author img

By ETV Bharat Karnataka Team

Published : Mar 3, 2024, 7:36 PM IST

ಪಲ್ಸ್​ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ
ಪಲ್ಸ್​ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

ಮೈಸೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಎಸ್.ಎಂ.ಟಿ ಆಸ್ಪತ್ರೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಮಕ್ಕಳು ಅಂಗಾಂಗಳ ನ್ಯೂನ್ಯತೆಗೆ ಒಳಗಾಗಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರವು ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲಾ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಪೋಲಿಯೋ ಹಾಕಿಸಬೇಕು. ಇದರಿಂದ ಸಮಾಜದಲ್ಲಿ ಎಲ್ಲ ಮಕ್ಕಳ ಆರೋಗ್ಯದಿಂದ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪಲ್ಸ್​ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ
ಪಲ್ಸ್​ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ವಿಶೇಷ ಚೇತನ ಮಕ್ಕಳಿಗೆ ಗಾಲಿಕುರ್ಚಿ, ಎಂ.ಆರ್ ಕಿಟ್ ಸಾಮಗ್ರಿಗಳು ಹಾಗೂ ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್​ಟಾಪ್‌ಗಳನ್ನು ವಿತರಣೆ ಮಾಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ, ಎಂ.ಎಂ.ಸಿ. ಮತ್ತು ಆರ್‌ಐ ನಿರ್ದೇಶಕರಾದ ಡಾ.ದಾಕ್ಷಾಯಿಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜಯಂತ್, ನೋಡಲ್ ಅಧಿಕಾರಿ ಡಾ.ವಸಂತ್, ಸಿಎಚ್ಒ ಡಾ.ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ
ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಹ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಅವರು ಜಲದರ್ಶಿನಿ ಅತಿಥಿ ಗೃಹದಲ್ಲಿ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿ, ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್​ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು "ಪಂಚಮಿತ್ರ" ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: ದೇಶದಲ್ಲಿ ಪೋಲಿಯೋ ನಿರ್ಮೂಲನೆಯಾಗಿರುವ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಸಚಿವ ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.