ETV Bharat / state

ಜಾತಿ ನಿಂದನೆ ಆರೋಪ ಪ್ರಕರಣ: ವಕೀಲ ಕೆ.ಎನ್.ಜಗದೀಶ್ ಬಂಧನ - Lawyer K N Jagadish Arrest - LAWYER K N JAGADISH ARREST

ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಉಳಿದಿದ್ದ ವಕೀಲ ಕೆ.ಎನ್. ಜಗದೀಶ್ ಅವರನ್ನು ಬಂಧಿಸಲಾಗಿದೆ.

arrest
ವಕೀಲ ಕೆ.ಎನ್.ಜಗದೀಶ್ (ETV Bharat)
author img

By ETV Bharat Karnataka Team

Published : Aug 30, 2024, 9:02 AM IST

ಬೆಂಗಳೂರು: ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಜಗದೀಶ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಸಾಕಷ್ಟು ಬಾರಿ ನೋಟಿಸ್ ಜಾರಿಗೊಳಿಸಿದರೂ ಹಾಜರಾಗಿರದ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜಗದೀಶ್ ಗೋವಾದಲ್ಲಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಸದ್ಯ ಅವರನ್ನು ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಶಾಸಗಿ ಶಾಲೆಗೆ ಹುಸಿ ಬಾಂಬ್ ಸಂದೇಶ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ - fake bomb message

ETV Bharat Logo

Copyright © 2024 Ushodaya Enterprises Pvt. Ltd., All Rights Reserved.