ETV Bharat / state

ಪ್ರಮಾಣ ಪತ್ರ ಅಸಮರ್ಪಕ ಎಂದಾದರೆ ಪ್ರತಿಸ್ಪರ್ಧಿಗೆ ಗೆಲುವೆಂಬ ಆರೋಪ ಸಾಬೀತುಪಡಿಸಲಿ: ಹ್ಯಾರಿಸ್​ ಪರ ವಕೀಲ - ಶಾಂತಿನಗರ ಕ್ಷೇತ್ರ

ಪ್ರಮಾಣ ಪತ್ರ ಅಸಮರ್ಪಕವಿದ್ದಲ್ಲಿ ಪ್ರತಿಸ್ಪರ್ಧಿಗೆ ಗೆಲುವಾಗಲಿದೆ ಎಂಬ ಆರೋಪಕ್ಕೆ ಸ್ಪಷ್ಟತೆ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಸಲ್ಲಿಸಿರುವ ಚುನಾವಣಾ ಅರ್ಜಿಗೆ ಹ್ಯಾರಿಸ್​ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

lawyer objected  candidate election petition  candidate election petition  ಆರೋಪಕ್ಕೆ ಸ್ಪಷ್ಟತೆ ನೀಡಬೇಕು
ಪ್ರಮಾಣ ಪತ್ರ ಅಸಮರ್ಪಕ
author img

By ETV Bharat Karnataka Team

Published : Jan 26, 2024, 8:52 AM IST

ಬೆಂಗಳೂರು: ಚುನಾವಣೆಗಳಲ್ಲಿ ಅಸಮರ್ಪಕ ನಾಮಪತ್ರ ಸ್ವೀಕರಿಸಿದ ಕಾರಣ ಅದು ಪ್ರತಿಸ್ಪರ್ಧಿಯ ಗೆಲುವಿಗೆ ಅಡ್ಡಿಯಾಗಲಿದೆ ಎಂಬ ಆರೋಪವನ್ನು ಸಾಬೀತುಪಡಿಸಬೇಕು. ಅಂತಹ ಕ್ರಮ ಸೋಲಿಗೆ ಹೇಗೆ ಕಾರಣವಾಯಿತು ಎಂಬುದರ ಕುರಿತು ವಿವರಣೆ ನೀಡಬೇಕು ಎಂದು ಶಾಂತಿನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕೆ.ಶಿವಕುಮಾರ್​ ಸಲ್ಲಿಸಿದ್ದ ತಕರಾರು ಅರ್ಜಿಯ ಕುರಿತಂತೆ ಹ್ಯಾರಿಸ್​ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.

ಚುನಾವಣೆ ವೇಳೆ ಸಲ್ಲಿಸಲಾದ ಫಾರಂ ನಂ.26ರಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರಿಸ್‌ ತಮ್ಮ ಆಸ್ತಿ ವಿವರಗಳನ್ನು ಸರಿಯಾಗಿ ಘೋಷಿಸಿಲ್ಲ. ಹೀಗಾಗಿ, ಅವರನ್ನು ಅನರ್ಹಗೊಳಿಸಿ ನನ್ನನ್ನೇ ವಿಜಯಶಾಲಿ ಎಂದು ಘೋಷಿಸಬೇಕು ಎಂದು ಕೋರಿ ಕೆ.ಶಿವಕುಮಾರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆಯಲ್ಲಿ ಶಿವಕುಮಾರ್​ ಪರ ವಕೀಲರು, ಪ್ರಮಾಣ ಪತ್ರ ಅಸಮರ್ಪಕವಾಗಿರುವುದರಿಂದ ಪ್ರತಿಸ್ಪರ್ಧಿಗೆ ಗೆಲುವಾಗಲು ಕಾರಣವಾಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಆಕ್ಷೇಪಿಸಿದ ಹ್ಯಾರಿಸ್​ ಪರ ವಕೀಲ, ಅರ್ಜಿದಾರರು ಹ್ಯಾರಿಸ್‌ ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಮತ್ತು ಮಾನಸಿಕ ಯಾತನೆ ಉಂಟು ಮಾಡುವ ದೃಷ್ಟಿಯಿಂದ ಈ ತಕರಾರು ಅರ್ಜಿ ಸಲ್ಲಿಸಿದ್ದಾರೆ ಎಂದರು.

ಅರ್ಜಿದಾರರು ದಾವೆಯಲ್ಲಿ ವಿವರಿಸಿರುವ ಅಂಶಗಳ ಆಧಾರದಡಿ ಹ್ಯಾರಿಸ್‌ ಅವರ ವಿರುದ್ಧದ ಆರೋಪಗಳ ವಿಚಾರಣೆಗಾಗಿ ಪ್ರತಿವಾದಿಗಳನ್ನು ಅರೆ ಅಪರಾಧಿಕ ನ್ಯಾಯಿಕ ಪ್ರಕ್ರಿಯೆಗೆ ಒಳಪಡಿಸಬಾರದು. ಈ ಹಂತದಲ್ಲಿಯೇ ಈ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೋರಿದರು. ಇದೇ ವೇಳೆ ಪ್ರತಿವಾದಿ ಪರ ಹಾಜರಿದ್ದ ಹಿರಿಯ ವಕೀಲ ವಿವೇಕ ರೆಡ್ಡಿ ಅವರೂ ಇದಕ್ಕೆ ಪ್ರತಿಯಾಗಿ ತಮ್ಮ ವಾದವನ್ನು ಸಮರ್ಥಿಸಿಕೊಳ್ಳುವ ಸುಪ್ರೀಂ ಕೋರ್ಟ್‌ನ ಮತ್ತೊಂದು ಪೂರ್ವ ನಿದರ್ಶನದ ತೀರ್ಪು ನೀಡುತ್ತಿರುವುದಾಗಿ ತಿಳಿಸಿದರು. ಉಭಯತ್ರರ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ಸುಪ್ರೀಂ ಕೋರ್ಟ್‌ನ ಎರಡೂ ತೀರ್ಪುಗಳ ಪರಾಮರ್ಶೆ ನಡೆಸುವುದಾಗಿ ತಿಳಿಸಿ ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಶಾಸಕ ಎನ್.ಎ.ಹ್ಯಾರಿಸ್ ತಮ್ಮ ಚರ ಮತ್ತು ಸ್ಥಿರಾಸ್ತಿಗಳ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಿಲ್ಲ. ಅವರ ಸುಳ್ಳು ಘೋಷಣೆಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಚರ ಮತ್ತು ಸ್ಥಿರಾಸ್ತಿಗಳನ್ನು ವಾಸ್ತವಕ್ಕಿಂತಲೂ ಕಡಿಮೆ ಅಂದಾಜಿನಲ್ಲಿ ದಾಖಲಿಸಿದ್ದಾರೆ. ಹೀಗಾಗಿ, ಈ ಅಸಮರ್ಪಕ ನಾಮಪತ್ರ ಸ್ವೀಕಾರದ ಕಾರಣದಿಂದಾಗಿ ಅದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿ ನನ್ನ ಸೋಲಿಗೆ ಕಾರಣವಾಗಿದೆ. ಹೀಗಾಗಿ, ಅವರನ್ನು ಅನರ್ಹಗೊಳಿಸಿ ನನ್ನನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಿವರಾಮ ಕಾರಂತ ಬಡಾವಣೆ ಮೇಲ್ವಿಚಾರಣಾ ಸಮಿತಿಗೆ ₹18 ಕೋಟಿ ವೆಚ್ಚ: ಇನ್ಮುಂದೆ ಹೈಕೋರ್ಟ್‌ನಿಂದಲೇ ಮೇಲ್ವಿಚಾರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.